More

    ಹಂತಹಂತವಾಗಿ ಹಳ್ಳಿಗಳ ಅಭಿವೃದ್ಧಿ

    ಬೈಲಕುಪ್ಪೆ : ಕ್ಷೇತ್ರದ ಹಳ್ಳಿಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಮಾಡಲಾಗುದು ಎಂದು ಪಶು ಸಂಗೋಪನ ಹಾಗೂ ರೇಷ್ಮೆ ಸಚಿವ ಕೆ ವೆಂಕಟೇಶ್ ತಿಳಿಸಿದರು.

    ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಗ್ರಾಮದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈ ರಸ್ತೆಗೆ 50 ಲಕ್ಷ ರೂ. ಅನುದಾನ ನೀಡಲಾಗಿದೆ. ಇನ್ನುಳಿದ ಕಾಮಗಾರಿಗಳನ್ನು ಮಾಡಿ ಮುಗಿಸಬೇಕು. ಅನುದಾನ ಕೊರತೆಯಾದರೆ ಮತ್ತಷ್ಟು ಅನುದಾನ ಬಿಡುಗಡೆ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.

    ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಎಲ್ಲ ರೀತಿಯ ಅಭಿವೃದ್ಧಿ ಕೆಲಸಕ್ಕೆ ಹೆಚ್ಚು ಒತ್ತು ನೀಡಲಾಗುವುದು. ಕಾರ್ಮಿಕ ವರ್ಗದವರಿಗೆ ನಿವೇಶನ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
    ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿರುಗೂರು ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಚ್ಚುವರಿ ಕೊಠಡಿಯನ್ನು ಉದ್ಘಾಟಿಸಿದರು. ರಾಣಿಗೇಟ್ ಗ್ರಾಮದಲ್ಲಿ 4.5 ಕೋಟಿ ರೂ. ವೆಚ್ಚದ ಗಿರಿಜನ ವಾಲ್ಮೀಕಿ ಬುಡಕಟ್ಟು ಆಶ್ರಮ ಶಾಲಾ ಕಟ್ಟಡ ಕಾುಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಮರೂರು ಹಾಗೂ ದೊಡ್ಡ ಹೊಸೂರು ಗ್ರಾಮಕ್ಕೆ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಅಧಿಕಾರಿಗಳ ನಿರ್ಲಕ್ಷೃದಿಂದಾಗಿ ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ ಎಂದು ದೊಡ್ಡ ಹೊಸೂರು ಗ್ರಾಮಸ್ಥರು ಅಳಲು ತೋಡಿಕೊಂಡರು. ನಾಳೆಯಿಂದಲೇ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯಾಗಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗೆ ತಾಕೀತು ಮಾಡಿದರು.

    ಕೊಪ್ಪ ಸಹಕಾರ ಸಂಘಕ್ಕೆ ಭೇಟಿ ನೀಡಿದ ಸಚಿವರು ವ್ಯವಸ್ಥಾಪಕಿ ಲೀಲಾವತಿ ಅವರನ್ನು ಕರೆಯಿಸಿ ಸಂಬಂಧಪಟ್ಟ ದಾಖಲಾತಿಗಳನ್ನು ಒದಗಿಸಿ ಕೊಡುತೇನೆ. ನನಗೆ ಮೂರು ಕೋಟಿ ರೂ. ಸಾಲ ಮಂಜೂರು ಮಾಡಿಸಿಕೊಡುತ್ತೀರಾ ಎಂದು ಕೇಳಿದರು. ಶಾಸಕರ ಪ್ರಶ್ನೆಗೆ ಕಕಾಬಿಕ್ಕಿಯಾದ ವ್ಯವಸ್ಥಾಪಕಿ ನಸುನಕ್ಕು ಆಯ್ತು ಸಾರ್ ಎಂದು ತಿಳಿಸಿದರು .

    ಬೈಲಕುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಸಾರ್ ಅಹಮದ್, ಉಪಾಧ್ಯಕ್ಷೆ ಗೀತಾ ಸುಬ್ರಮಣ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ. ಸ್ವಾಮಿ, ರೆಹಮತ್ ಜಾನ್ ಬಾಬು, ತಹಸೀಲ್ದಾರ್ ಕುಂಞ ಅಹಮದ್, ತಾಪಂ ಇಒ ಸುನಿಲ್ ಕುಮಾರ್, ಪಿಡಿಒಗಳಾದ ಬೋರೇಗೌಡ, ಸತೀಶ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಚಂದ್ರಶೇಖರ್, ಮುಖಂಡರಾದ ಶಿವಕುಮಾರ್, ಅಸ್ಲಾಂ , ಶಿವು, ರಿಯಾಜ್, ಶಿವಪ್ಪ, ಶೇಖರ್, ಗ್ರಾಪಂ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts