ಗೋಹತ್ಯೆ ನಿಷೇಧ ಅನುಷ್ಠಾನ

< ಕೃಷ್ಣ ಮಠದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭರವಸೆ>

ಉಡುಪಿ: ಗೋಹತ್ಯೆ ನಿಷೇಧ ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

ಕೃಷ್ಣ ಮಠ ರಾಜಾಂಗಣದಲ್ಲಿ ಪರ್ಯಾಯ ಶ್ರೀಪಲಿಮಾರು ಮಠದ ಆಶ್ರಯದಲ್ಲಿ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಕಾರ್ಯ ಕ್ರಮಗಳ ಅಂಗವಾಗಿ ಗುರುವಾರ ಆಯೋಜಿಸಲಾದ 5ನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪಲಿಮಾರು ಶ್ರೀಗಳ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಮಠ, ಮಂದಿರ, ಯತಿಗಳ ಭಾವನೆಗೆ ಧಕ್ಕೆ ಆಗದಂತೆ ಆಡಳಿತ ನಿರ್ವಹಿಸಲಾಗುವುದು ಎಂದ ಅವರು, ರಾಜ್ಯದ ನೆರೆ, ಪ್ರವಾಹದಿಂದ ಲಕ್ಷಾಂತರ ಮಂದಿ ಸಂಕಷ್ಟದಲ್ಲಿದ್ದಾರೆ. ಅವರ ಮೇಲೆ ಕೃಷ್ಣ ದೇವರ ಅನುಗ್ರಹವಿರಲಿ ಎಂದು ಆಶಿಸಿದರು.

ಪರ್ಯಾಯ ಪಲಿಮಾರು ಶ್ರೀಗಳು ಆಶೀರ್ವಚನ ನೀಡಿದರು. ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ ಅನುಗ್ರ ಸಂದೇಶ ನೀಡಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ್ ಮೃತ್ಯುಂಜಯ ಜೋಷಿ, ಶಾಸಕ ಕೆ.ರಘುಪತಿ ಭಟ್ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *