24.78 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶ

market ride
ಬೈಂದೂರು ಸಂತೆ ಮಾರುಕಟ್ಟೆಗೆ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಮುಖ್ಯಾಧಿಕಾರಿಗಳ ತಂಡ ಹಠಾತ್ ಭೇಟಿ ನೀಡಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಕುರಿತು ಪರಿಶೀಲನೆ ನಡೆಸಿದರು
Published on

ಬೈಂದೂರು: ಇಲ್ಲಿನ ಪಪಂ ಆಡಳಿತಾಧಿಕಾರಿ ಹಾಗೂ ತಹಸೀಲ್ದಾರ್ ಪ್ರದೀಪ್ ಆರ್. ಮತ್ತು ಮುಖ್ಯಾಧಿಕಾರಿ ಅಜಯ್ ಭಂಡಾರಕರ್ ನೇತೃತ್ವದಲ್ಲಿ ಬೈಂದೂರು ಸಂತೆ ಮಾರುಕಟ್ಟೆಗೆ ಹಠಾತ್ ಭೇಟಿ ನೀಡಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಕುರಿತು ಪರಿಶೀಲನೆ ನಡೆಸಿದರು.

ನಿಷೇಧಿತ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಮಾಡುತ್ತಿದ್ದ ವ್ಯಾಪಾರಸ್ಥ ಅಂಗಡಿಗಳ ಮೇಲೆ ದಾಳಿ ನಡೆಸಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆಸಿದ್ದು, ವಿವಿಧ ವ್ಯಾಪಾರಸ್ಥರಿಂದ ಸುಮಾರು 24.78 ಕೆ.ಜಿಗಳಷ್ಟು ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಯಿತು.

ದಿಢೀರ್ ದಾಳಿ ಬಗ್ಗೆ ವ್ಯಾಪಾರಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಅಧಿಕಾರಿಗಳ ಮತ್ತು ವ್ಯಾಪಾರಿಗಳ ಮದ್ಯೆ ಮಾತಿನ ಚಕಮಕಿ ನಡೆಯಿತು. ವಿರೋಧದ ನಡುವೆ ಮುಖ್ಯಾಧಿಕಾರಿಗಳು ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ದೂರು ದಾಖಲಿಸುವುದಾಗಿ ಎಚ್ಚರಿಕೆ ನೀಡಿದರು. ಪಪಂ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹಾಗೂ ವ್ಯಾಪಾರಸ್ತರಿಗೆ ಈಗಾಗಲೇ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಪ್ರತಿದಿನ ಕಸ ಸಂಗ್ರಹ ವಾಹನದಲ್ಲಿ ಜಾಗೃತಿ ಮೂಡಿಸಿದರೂ ಪುನಃ ಬಳಸುತ್ತಿರುವವರ ವಿರುದ್ಧ ಏಕಬಳಕೆ ಪ್ಲಾಸ್ಟಿಕ್ ನಿಷೇಧ ತೀವ್ರಗೊಳಿಸಿ ತಪ್ಪಿತಸ್ಥರ ವಿರುದ್ಧ ದಂಡ ವಿಧಿಸಿ ಮತ್ತು ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಖಡಕ್ ಸಂದೇಶ ರವಾನಿಸಿದರು. ಪಪಂ ಕಿರಿಯ ಆರೋಗ್ಯ ನಿರೀಕ್ಷಕ ಸಂತೋಷ ಎಂ.ಡಿ., ಕಿರಿಯ ಅಭಿಯಂತ ಕಾರ್ತಿಕ್ ಹಾಗೂ ಪಪಂ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net