More

    ಎಸ್​ಎಸ್​ಎಲ್​ಸಿ ಪರೀಕ್ಷೆ ಕೇಂದ್ರದ ಸುತ್ತ ನಿಷೇಧಾಜ್ಞೆ

    ಗದಗ: 2020-21ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಜು.19 ಮತ್ತು 22ರಂದು ಜರುಗಲಿವೆ. ಪರೀಕ್ಷಾ ಸಮಯದಲ್ಲಿ ಅವ್ಯವಹಾರ ತಡೆಗಟ್ಟಲು ಮತ್ತು ಶಾಂತಿ ಕಾಪಾಡಲು ಜಿಲ್ಲೆಯ 103 ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜರಾಕ್ಸ್ ಅಂಗಡಿ, ಬುಕ್ ಸ್ಟಾಲ್​ಗಳನ್ನು ಬಂದ್ ಮಾಡಲು ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೆ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
    ವ್ಯಾಕ್ಸಿನ್ ಪಡೆದವರಿಗೆ ಉಸ್ತುವಾರಿ ಹೊಣೆ
    ಶಿರಹಟ್ಟಿ: ಪರೀಕ್ಷಾ ಕೇಂದ್ರದ ಉಸ್ತುವಾರಿ ಸಿಬ್ಬಂದಿ ಕನಿಷ್ಠ ಒಂದು ಡೋಸ್ ವ್ಯಾಕ್ಸಿನ್ ಪಡೆದಿರಬೇಕು. ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಯಾವೊಬ್ಬ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ತಹಸೀಲ್ದಾರ್ ಜೆ.ಬಿ. ಮಜ್ಜಗಿ ತಿಳಿಸಿದ್ದಾರೆ.
    ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
    ಬಿಇಒ ಆರ್.ಎಸ್. ಬುರಡಿ ಮಾತನಾಡಿ, ‘ತಾಲೂಕಿನ 22 ಪ್ರೌಢಶಾಲೆಗಳ 1,153 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. 7 ಪರೀಕ್ಷಾ ಕೇಂದ್ರಗಳನ್ನು ಸ್ಥಾಪನೆ ಮಾಡಿದ್ದು, ಒಟ್ಟು 320 ಸಿಬ್ಬಂದಿ ನಿಯೋಜಿಸಲಾಗಿದೆ. ಬೇರೆ ತಾಲೂಕು, ಜಿಲ್ಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 65 ವಿದ್ಯಾರ್ಥಿಗಳು ತಾಲೂಕಿನ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದರು. ಸಿಪಿಐ ವಿಕಾಶ ಲಮಾಣಿ, ಪಪಂ ಮುಖ್ಯಾಧಿಕಾರಿ ಮಲ್ಲೇಶ ಎಂ. ಶರೀಫಸಾಬ ನದಾಫ, ಎ.ವಿ. ಮೂರಶಿಳ್ಳಿ, ಈಶ್ವರ ಮೆಡ್ಲೇರಿ, ಆರೋಗ್ಯ ಇಲಾಖೆಯ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts