More

    ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರನ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ಪ್ರತಿಬಂಧಕಾದೇಶ!

    ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ (ಕೆಎಸ್‌ಡಿಎಲ್) ಕಚ್ಚಾ ವಸ್ತು ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದ ಆರೋಪಿಗಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಬೆಂಗಳೂರು ಜಲ ಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಎಂ.ವಿ. ಪ್ರಶಾಂತ್ ಕುಮಾರ್ ವಿರುದ್ಧ ಯಾವುದೇ ರೀತಿಯಲ್ಲಿ ಮಾನಹಾನಿ ಸುದ್ದಿ ಪ್ರಕಟಿಸದಂತೆ ಬೆಂಗಳೂರಿನ ಸಿವಿಲ್ ಮತ್ತು ಸೆಷನ್ಸ್​ ನ್ಯಾಯಾಲಯವು ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ಹೊರಡಿಸಿದೆ.

    ಇದನ್ನೂ ಓದಿ: ಬಾರ್‌ಗೆ ಬಂದ ಕಡಲಾಮೆ!; ಗ್ರಾಹಕರ ಟೇಬಲ್​ ಕೆಳಗೇ ಇಟ್ಟ ಮೊಟ್ಟೆಗಳ ಸಂರಕ್ಷಣೆ

    ಪ್ರತಿಬಂಧಕಾದೇಶ ಹೊರಡಿಸಲು ಕೋರಿ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪ್ರಶಾಂತ್ ಕುಮಾರ್ ಸಲ್ಲಿಸಿದ್ದ ದಾವೆಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಾಲಗೋಪಾಲ ಕೃಷ್ಣ ಅವರು ಈ ಆದೇಶ ಮಾಡಿದ್ದಾರೆ.

    ಇದನ್ನೂ ಓದಿ: ಪತ್ನಿಯನ್ನು ಕೊಂದು ಶವ ತುಂಡು ತುಂಡು ಮಾಡಿ ವಾಟರ್​ ಟ್ಯಾಂಕ್​ನೊಳಕ್ಕೆ ಹಾಕಿದ್ದ; ತಿಂಗಳ ಬಳಿಕ ವಿಷಯ ಬಹಿರಂಗ

    ಮಾಧ್ಯಮಗಳಲ್ಲಿ ದಾವೆದಾರರ ವಿರುದ್ಧ ಯಾವುದೇ ತೆರೆನಾದ ಮಾನಹಾನಿ ಅಭಿಪ್ರಾಯ ಪ್ರಸಾರ ಹಾಗೂ ಪ್ರಚಾರ ಮಾಡಬಾರದು. ಯಾವುದೇ ತೆರನಾದ ಚರ್ಚೆ (ಪ್ಯಾನಲ್ ಡಿಸ್ಕಷನ್) ನಡೆಸಬಾರದು ಎಂದು ಆದೇಶದಲ್ಲಿ ನ್ಯಾಯಾಲಯ ನಿರ್ದೇಶಿಸಿದೆ. ಜತೆಗೆ, ದಾವೆಯಲ್ಲಿ ಪ್ರತಿವಾದಿಗಳಿರುವ ವಿವಿಧ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ಸಮನ್ಸ್ ಜಾರಿಗೊಳಿಸಿ ಏ.20ಕ್ಕೆ ವಿಚಾರಣೆ ಮುಂದೂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts