

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚುನಾವಣಾ ಅಖಾಡ ಕಾವೇರಿದೆ. ಮೂರೂ ಪಕ್ಷದ ಘಟಾನುಘಟಿ ನಾಯಕರು ಇಂದು ತಮ್ಮ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಮಾಡಲಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೈಸೂರು ಹಾಗೂ ಚಾಮರಾಜನಗರ ಪ್ರವಾಸ ಮಾಡಲಿದ್ದಾರೆ. ಟಿ.ನರಸೀಪುರ, ಹನೂರು ಹಾಗೂ ಕೆಆರ್.ನಗರದಲ್ಲಿ ಭರ್ಜರಿ ಪ್ರಚಾರ ಮಾಡಲಿದ್ದಾರೆ. ಇದನ್ನೂ ಓದಿ: ಬಿಜೆಪಿಯ 175 ಪ್ರಮುಖರ ಜತೆ ಅಮಿತ್ ಷಾ ಮಹತ್ವದ ಸಭೆ; ಶೆಟ್ಟರ್ ಪ್ರಕರಣದ ಕುರಿತು ಹೇಳಿದ್ದೇನು?
ಇನ್ನೊಂದೆಡೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪ್ರಚಾರ ಕಣಕ್ಕಿಳಿದಿದ್ದು, ಇಂದು ಪಿರಿಯಾಪಟ್ಟಣ ಹಾಗೂ ಕೆ.ಆರ್.ನಗರದಲ್ಲಿ ದೊಡ್ಡ ಗೌಡರು ಪ್ರಚಾರ ಮಾಡಲಿದ್ದಾರೆ. ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿದಿರುವ ವರುಣ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ.
ಮೈಸೂರು ನಗರದ ಚಾಮರಾಜ ಹಾಗೂ ಕೃಷ್ಣರಾಜ ಕ್ಷೇತ್ರದಲ್ಲಿ ಪ್ರಚಾರ ಸಭೆ ನಡೆಸಲಿರುವ ಎಚ್ಡಿಕೆ, ಬಳಿಕ ವರುಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದಾರೆ. ಇದನ್ನೂ ಓದಿ: ಮಗಳ ಮೃತದೇಹದ ಜತೆಗೆ ಐದು ದಿನಗಳನ್ನು ಕಳೆದ ತಾಯಿ!
ಬಿಜೆಪಿಯ ಚಾಮರಾಜ ಕ್ಷೇತ್ರದ ಅಭ್ಯರ್ಥಿ ಪರ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಅವರು ಇಂದು ಪ್ರಚಾರ ಮಾಡಲಿದ್ದಾರೆ. (ದಿಗ್ವಿಜಯ ನ್ಯೂಸ್)