ರಾಮಲಲ್ಲಾನ ಪ್ರತಿಷ್ಠಾಪನೆಗೆ ದಿನಗಣನೆ; ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಕರ್ನಾಟಕದ ಪ್ರಮುಖ ಮಠಾಧೀಶರು

Ayodhya
Published on

ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಈಗಾಗಲೇ ಧಾರ್ಮಿಕ ವಿಧಿವಿಧಾನಗಳು ಅರಂಭಗೊಂಡಿವೆ. ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಭಕ್ತರು ಕಾತುರದಿಂದ ಕಾಯುತ್ತಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಜನವರಿ 22,2024ರಂದು ಜರುಗುವ ರಾಮಲಲ್ಲಾನ ಪ್ರಾಣಪ್ರತಿಷ್ಟಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಜ್ಯದ ಪ್ರಮುಖ ಮಠಾಧೀಶರು ತೆರಳಿದ್ದಾರೆ. ರಾಜ್ಯದ ಏಖಳು ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗಿಯಾಗಲು ಅಯೋಧ್ಯೆಗೆ ತೆರಳಿದ್ದಾರೆ.

ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದ ಮಹಾಸ್ವಾಮಿಜಿ, ಚಿತ್ರದುರ್ಗದ ಮಾದರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮೀಜಿ, ಹೊಸದುರ್ಗದ ಕುಂಚಿಟಿಗ ಮಹಾಸಂಸ್ಥಾನದ ಶಾಂತವೀರ ಮಹಾಸ್ವಾಮೀಜಿ, ಚಿತ್ರದುರ್ಗದ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮಯ್ಯ ಮಹಾಸ್ವಾಮೀಜಿ. ಹರಿಹರದ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿ, ಹರಿಹರ ಪಂಚಮಸಾಲಿ ಗುರುಪೀಠ ವಚನಾನಂದ ಸ್ವಾಮೀಜಿ, ಮಧುರೆ ಭಗೀರಥ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಅಯೋಧ್ಯೆಗೆ ತೆರಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net