ಪ್ರೌಢಶಾಲಾ ಶಿಕ್ಷಕರನ್ನು ಉಪನ್ಯಾಸಕ ಹುದ್ದೆಗೆ ಬಡ್ತಿ: ಮಾಹಿತಿ ಕೇಳಿದ ಪಿಯು ಇಲಾಖೆ

PU Board
Published on

ಬೆಂಗಳೂರು ಸ್ನಾತಕೋತ್ತರ ಪದವಿ ಪಡೆದಿರುವ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಉಪನ್ಯಾಸಕರಾಗಿ ಬಡ್ತಿ ನೀಡುವುದಕ್ಕಾಗಿ ಪಿಯು ಇಲಾಖೆಯು ಪ್ರೌಢಶಿಕ್ಷಣ ಇಲಾಖೆಯನ್ನು ಮಾಹಿತಿ ಕೇಳಿದೆ.

ಪಿಯು ಉಪನ್ಯಾಸಕ ಹುದ್ದೆಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೇಡ್-2 ಸಹ ಶಿಕ್ಷಕರ ವೃಂದಕ್ಕೆ ಬಡ್ತಿ ನೀಡಲಾಗುತ್ತಿದೆ. ಹೀಗಾಗಿ, ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಅರ್ಯನಿರ್ವಹಿಸುತ್ತಿರುವ ಗ್ರೇಡ್-2 ಸಹ ಶಿಕ್ಷಕರ ವಿವರಗಳ ಪಟ್ಟಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರುವವರ ಪಟ್ಟಿಯನ್ನು ಆಯಾ ವಿಭಾಗದಿಂದ ಸ್‌ಟಾ ಮತ್ತು ಹಾರ್ಡ್ ಪ್ರತಿಯನ್ನು ನೀಡುವಂತೆ ಪಿಯು ಇಲಾಖೆ ತಿಳಿಸಿದೆ.

ರಾಜ್ಯದ ನಾಲ್ಕೂ ವಿಭಾಗಗಳಿಂದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೇಡ್-2 ಸಹ ಶಿಕ್ಷಕರ ವೃಂದದಿಂದ ಉಪನ್ಯಾಸಕ ವೃಂದಕ್ಕೆ ಬಡ್ತಿ ನೀಡಲು ಸ್ನಾತಕೋತ್ತರ ಪದವಿ ಹೊಂದಿರುವ ಶಿಕ್ಷಕರ ಪಟ್ಟಿಯನ್ನು ನೀಡಲು ಕೋರಿರುತ್ತಾರೆ. ಆದ್ದರಿಂದ ತಮ್ಮ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಮಾಹಿತಿ ನೀಡುವಂತೆ ಪ್ರೌಢ ಶಿಕ್ಷಣ ಇಲಾಖೆಯು ಮೈಸೂರು, ಕಲಬುರಗಿ, ಬೆಳಗಾವಿ ವಿಭಾಗಗಳಿಗೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net