

ಮೂಲ್ಕಿ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತರಲು ಪ್ರಯತ್ನ ನಡೆಯುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಸರ್ಕಾರದ ಯೋಜನೆ ಅನುಷ್ಠಾನಗೊಂಡಿದ್ದು ಇನ್ನಷ್ಟು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನ ತಾಲೂಕು ಸಮಿತಿ ಅಧ್ಯಕ್ಷ ಆಲ್ವಿನ್ ಕ್ಲೆಮೆಂಟ್ ಕುಟಿನ್ಹ ಹೇಳಿದರು.
ಮೂಲ್ಕಿ ತಾಲೂಕಿನ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ತಾಲೂಕಿನ ಎಲ್ಲ ಕಾಲೇಜುಗಳಿಗೆ ಯುವ ನಿಧಿ ಯೋಜನೆ ಪ್ರಚಾರ ಹಾಗೂ ತಿಳಿವಳಿಕೆ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೂಲ್ಕಿಯ ವಿಜಯ ಕಾಲೇಜು ಮತ್ತು ಹಳೆಯಂಗಡಿ ಸರ್ಕಾರಿ ಕಾಲೇಜು ಹಾಗೂ ಕಟೀಲು ಕಾಲೇಜುಗಳಿಗೆ ತೆರಳಿ ಯುವನಿಧಿ ಪ್ಲಸ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು. ತಾಲೂಕಿನ ಪಂಚ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರು ಭಾಗವಹಿಸಿದ್ದರು.