ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಅಧ್ಯಾಪಕರಾಗಿ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಡಾ.ಶ್ರೀಧರ ಭಟ್ಟ ಅವರಿಗೆ, ಶಿಕ್ಷಣ ಇಲಾಖೆ ಪ್ರೊಫೆಸರ್ ವೃತ್ತಿ ಪದೋನ್ನತಿ ಮಂಜೂರು ಮಾಡಿದೆ.
ಡಾ.ಶ್ರೀಧರ ಭಟ್ಟ ಉಜಿರೆಯ ಪ್ರತಿಷ್ಠಿತ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ, ನಂತರ ಸಹ ಪ್ರಾಧ್ಯಾಪಕರಾಗಿ, ಕಾಲೇಜಿನ ವಿವಿಧ ಹಂತದ ಚಟುವಟಿಕೆಗಳಲ್ಲಿ ಹಲವು ಜವಾಬ್ದಾರಿ ನಿಭಾಯಿಸಿ ಸಂಸ್ಥೆಯ ಏಳಿಗೆಗೆ ಶ್ರದ್ಧೆಯಿಂದ ದುಡಿದವರು. ಅವರ ಶೈಕ್ಷಣಿಕ, ಸಾಮಾಜಿಕ ಸಾಧನೆ ಗುರುತಿಸಿ ಸರ್ಕಾರ ಪದೋನ್ನತಿ ಮಂಜೂರು ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.