More

    ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ

    ಪಿರಿಯಾಪಟ್ಟಣ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಸಹಾಯಕ ಚುನಾವಣಾಧಿಕಾರಿ ಹಾಗೂ ಮುಡಾ ಕಾರ್ಯದರ್ಶಿ ಜಿ.ಡಿ.ಶೇಖರ್ ಎಚ್ಚರಿಸಿದರು.


    ಪಟ್ಟಣದ ತಾಲೂಕು ಆಡಳಿತ ಭವನದಲ್ಲಿನ ಚುನಾವಣಾ ಕಚೇರಿಯಲ್ಲಿ ಶನಿವಾರ ವಿವಿಧ ರಾಜಕೀಯ ಪಕ್ಷದ ಮುಖಂಡರು ಬಾರ್ ಹಾಗೂ ಕಲ್ಯಾಣ ಮಂಟಪ ಮತ್ತು ಸಮುದಾಯ ಭವನಗಳ ಮಾಲೀಕರ ಸಭೆ ನಡೆಸಿ ಮಾತನಾಡಿದರು.


    ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ವಿವಿಧ ಮಾರ್ಗಸೂಚಿಗಳನ್ನು ತಿಳಿಸಿ ನೀತಿ ಸಂಹಿತೆ ಜಾರಿಗೆ ತಂದಿದ್ದು ಪ್ರತಿಯೊಬ್ಬರೂ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸಬೇಕು, ರಾಜಕೀಯ ಪಕ್ಷದ ಮುಖಂಡರು ಸಭೆ ಸಮಾರಂಭಗಳನ್ನು ಆಯೋಜಿಸುವಾಗ ಕಡ್ಡಾಯವಾಗಿ ಅನುಮತಿ ಪಡೆಯಬೇಕು, ಕಲ್ಯಾಣ ಮಂಟಪ ಮತ್ತು ಸಮುದಾಯ ಭವನಗಳ ಮಾಲೀಕರು ಸಭೆ, ಸಮಾರಂಭಗಳನ್ನು ಬಾಡಿಗೆ ನೀಡುವ ಸಂದರ್ಭ ಚುನಾವಣಾ ಆಯೋಗದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಬಾರ್ ಮಾಲೀಕರು ಮದ್ಯ ಮಾರಾಟದ ಸಂದರ್ಭದಲ್ಲಿ ಚುನಾವಣಾ ಆಯೋಗದ ಸೂಚನೆಯನ್ನು ಕಡ್ಡಾಯ ಪಾಲಿಸಬೇಕು ಎಂದು ತಿಳಿಸಿದರು.


    ತಹಸೀಲ್ದಾರ್ ಸುರೇಂದ್ರಮೂರ್ತಿ ಮಾತನಾಡಿ, ತಾಲೂಕಿನಲ್ಲಿ ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ, ಸಾರ್ವಜನಿಕರು ಚುನಾವಣಾ ಆಯೋಗದ ಸೂಚನೆಗಳನ್ನು ಪಾಲಿಸಿ ತಾಲೂಕು ಆಡಳಿತದೊಂದಿಗೆ ಸಹಕರಿಸಬೇಕು ಎಂದರು.


    ಚುನಾವಣಾ ಇಲಾಖೆ ಸಿಬ್ಬಂದಿ ಮತ್ತು ವಿವಿಧ ರಾಜಕೀಯ ಪಕ್ಷ ಮುಖಂಡರು ಬಾರ್ ಹಾಗೂ ಕಲ್ಯಾಣ ಮಂಟಪ ಸಮುದಾಯ ಭವನಗಳ ಮಾಲೀಕರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts