25.5 C
Bangalore
Monday, December 16, 2019

35 ಎ ವಿಧಿ ರಕ್ಷಿಸದಿದ್ದರೆ ಸ್ಥಳೀಯ ಸಂಸ್ಥೆ ಚುನಾವಣೆ ಬಹಿಷ್ಕಾರ ಎಂದ ಫಾರೂಕ್​ ಅಬ್ದುಲ್ಲಾ

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ನವದೆಹಲಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ 35(ಎ) ವಿಧಿ ಕುರಿತಾದ ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸದೇ ಇದ್ದಲ್ಲಿ ನಮ್ಮ ಪಕ್ಷ ಜಮ್ಮು ಮತ್ತು ಕಾಶ್ಮೀರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನ್ಯಾಷನಲ್​ ಕಾನ್ಫರೆನ್ಸ್​ ಪಕ್ಷದ ನಾಯಕ ಫಾರೂಕ್​ ಅಬ್ದುಲ್ಲಾ ಅವರು ಬುಧವಾರ ಎಚ್ಚರಿಸಿದ್ದಾರೆ.

- Advertisement -

ನ್ಯಾಯಾಲಯದ ಒಳಗೆ 35(ಎ) ವಿಧಿಯ ರಕ್ಷಣೆಗೆ ಎರಡು ಸರ್ಕಾರಗಳು ಪರಿಣಾಮಕಾರಿ ಹೆಜ್ಜೆಯನ್ನು ಇಡಬೇಕೆಂದು ಫಾರೂಕ್​ ಆಗ್ರಹಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಶಾಶ್ವತ ನಿವಾಸಿಗಳ ಸರ್ಕಾರಿ ಉದ್ಯೋಗ ಹಾಗೂ ಆಸ್ತಿ ಮಾಲಿಕತ್ವವನ್ನು ರಕ್ಷಿಸುವ ಸಂವಿಧಾನ ವಿಧಿಯ ವಿರುದ್ಧ ಅನೇಕ ಎನ್​ಜಿಒಗಳು ಹಾಗೂ ವೈಯಕ್ತಿಕ ಅರ್ಜಿಗಳು ದಾಖಲಾಗಿದ್ದು, ಈ ಸಂಬಂಧ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ.

ಮುಂಬರುವ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡಬಹುದೆಂಬ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾದದಿಂದ ಸುಪ್ರೀಂ ಕೋರ್ಟ್ 35(ಎ) ವಿಧಿ ವಿರುದ್ಧದ ಅರ್ಜಿ ವಿಚಾರಣೆಯನ್ನು ಕಳೆದ ವಾರವೇ ಮುಂದಿನ ಜನವರಿಗೆ ಮುಂದೂಡಿದೆ.​

ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್​ ಮೆಹ್ತಾ ಅವರು ರಾಜ್ಯ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದು, 35(ಎ) ವಿಧಿ ಸಂಬಂಧದ ಯಾವುದೇ ಚರ್ಚೆ ಸದ್ಯದ ಪರಿಸ್ಥಿತಿಯಲ್ಲಿ ಕಣಿವೆ ಭಾಗದ ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಪರಿಣಾಮ ಬೀರಲಿದೆ. ಈಗಾಗಲೇ 4,500 ಪಂಚಾಯಿತಿ ಹಾಗೂ 1,145 ವಾರ್ಡ್​ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಒಂದು ವೇಳೆ ಈ ಚುನಾವಣೆ ನಡೆಯದಿದ್ದರೆ 4,335 ಕೋಟಿ ರೂ. ಹಣಕಾಸಿನ ಅನುದಾನ ನಷ್ಟವಾಗಲಿದೆ ಎಂದು ಹೇಳಿದ್ದಾರೆ.

35(ಎ) ಹಾಗೂ 370 ವಿಧಿಯಲ್ಲಿನ ಬದಲಾವಣೆ ವಿರುದ್ಧ ಈಗಾಗಲೇ ಕಣಿವೆ ರಾಜ್ಯದಲ್ಲಿ ಪ್ರತ್ಯೇಕವಾದಿಗಳಿಂದ ಪ್ರತಿಭಟನೆ ವ್ಯಕ್ತವಾಗಿದೆ. ಅಲ್ಲದೆ, ಇಲ್ಲಿನ ಪ್ರಮುಖ ರಾಜಕೀಯ ಪಕ್ಷಗಳಾದ ನ್ಯಾಷನಲ್​ ಕಾನ್ಫರೆನ್ಸ್​ ಹಾಗೂ ಪೀಪಲ್ಸ್​ ಡೆಮೋಕ್ರೆಟಿಕ್​ ವಿಧಿಯಲ್ಲಿನ ಬದಲಾವಣೆ ವಿರುದ್ಧ ಎಚ್ಚರಿಕೆಯನ್ನು ನೀಡಿವೆ. ಕಾಂಗ್ರೆಸ್​ನ ಹಿರಿಯ ನಾಯಕರೂ ಭಾರಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. (ಏಜೆನ್ಸೀಸ್​)

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...