ಮಣಿಪುರ ಮಹಿಳೆಯರಿಗೆ ರಕ್ಷಣೆ ನೀಡಿ

24 smg 3
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಮಹಿಳಾ ಘಟಕ ಹಾಗೂ ಸಾಲಿಡಾರಿಟಿ ಸಂಘಟನೆ ಪದಾಧಿಕಾರಿಗಳು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಆಯೇಷಾ, ಲಬೀದ್ ಶಾಫಿ, ಮುಜಾಬಿನ್, ಒಬೇದುಲ್ಲಾ, ಹಸೀನಾ, ವಾಜೀಹಾ, ವಾಹಬ್ ಇದ್ದರು.
Published on

ಶಿವಮೊಗ್ಗ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸೆಯನ್ನು ತಡೆಯಲು ಆಗ್ರಹಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಮಹಿಳಾ ಘಟಕ ಹಾಗೂ ಸಾಲಿಡಾರಿಟಿ ಸಂಘಟನೆ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಮಣಿಪುರದಲ್ಲಿ ಬಿಜೆಪಿ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕು. ಮಹಿಳೆಯರನ್ನು ಬೆತ್ತಲೆಗೊಳಿಸಿ ಹೀನಾಯ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಬೇಕು. ಇಡೀ ಘಟನೆಯನ್ನು ತನಿಖೆಗೊಳಪಡಿಸಬೇಕು. ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಬೇಕು. ಪ್ರಧಾನಿಯ ಗಾಢಮೌನ ಸರಿಯಲ್ಲ. ಅಲ್ಲಿ ಶಾಂತಿ ಕಾಪಾಡಬೇಕು ಎಂದರು. ಪ್ರಮುಖರಾದ ಆಯೇಷಾ, ಲಬೀದ್ ಶಾಫಿ, ಮುಜಾಬಿನ್, ಒಬೇದುಲ್ಲಾ, ಹಸೀನಾ, ವಾಜೀಹಾ, ವಾಹಬ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net