More

    ಸಂವಿಧಾನ ರಕ್ಷಣೆ ನಮ್ಮೆಲ್ಲರ ಕರ್ತವ್ಯ

    • ಹಾಸನ: ಸಂವಿಧಾನ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ ಹೇಳಿದರು.

    • ಅರಕಲಗೂಡು ಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಾ. ಅಂಬೇಡ್ಕರ್ ರಚಿಸಿದ ಸಂವಿಧಾನ ವಿಶ್ವ ಶ್ರೇಷ್ಠವಾಗಿದ್ದು, ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ. ನಾವೆಲ್ಲರೂ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕು ಎಂದರು.

    • ಉಪನ್ಯಾಸಕ ಹರೀಶ್ ಮಾತನಾಡಿ, ಇಡೀ ಸಾಮಾಜಿಕ ವ್ಯವಸ್ಥೆ ಇಂದು ನೆಮ್ಮದಿಯಿಂದ ಬದುಕುತ್ತಿದ್ದೇವೆಂದರೆ ಅದಕ್ಕೆ ಮೂಲ ಕಾರಣ ನಮ್ಮ ದೇಶದ ಸಂವಿಧಾನ. ಸಂವಿಧಾನ ಮತ್ತು ಬಾಬಾಸಾಹೇಬರು ಒಂದು ನಾಣ್ಯದ ಎರಡು ಮುಖಗಳು ಇದ್ದಂತೆ. ನಮ್ಮ ಸಂವಿಧಾನದಿಂದ ಪ್ರಧಾನಿಯನ್ನು ಪ್ರಶ್ನೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ಕೊಟ್ಟಿದೆ. ಅಧಿಕಾರಕ್ಕೆ ಬರುವ ಸರ್ಕಾರಗಳು ನೈತಿಕ ಜವಾಬ್ದಾರಿ ಹೊತ್ತು ಎಲ್ಲ ಕೆಲಸಗಳನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯ ಮಾಡಿದರು.

    • ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಮಕ್ಕಳು ಬಹುಜನ ಗೀತೆಗೆ ನೃತ್ಯ ಮಾಡಿ ನೆರೆದಿದ್ದ ಜನರನ್ನು ಗಮನ ಸೆಳೆದರು. ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್. ತಾಪಂ ಇಒ ಅಶೋಕ್, ತಾಲೂಕು ಕಚೇರಿ ಶಿರಸ್ತೇದಾರ್ ಸಿ. ಸ್ವಾಮಿ, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಯ್ಯ ಹಾಗೂ ವಿವಿಧ ಸಮುದಾಯದ ಮುಖಂಡರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

    • ನಗರದ ಪೇಟೆ ಮುಖ್ಯ ರಸ್ತೆಯಲ್ಲಿ ಸಂವಿಧಾನ ಜಾಗೃತಿ ರಥವನ್ನು ಮಹಿಳೆಯರು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡರು. ತಾಲೂಕು ಆಡಳಿತ, ವಿವಿಧ ಸಂಘಟನೆಯ ಮುಖಂಡರು, ಸರ್ಕಾರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts