

ಕುಂದಾಪುರ: ಭೂಮಿಯನ್ನು ಸಂರಕ್ಷಣೆ ವಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಭೂಮಿಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಮುಂದಾಗೋಣ. ಪ್ಲಾಸ್ಟಿಕ್ ಬಳಸುವುದನ್ನು ಕಡ್ಡಾಯವಾಗಿ ನಿಲ್ಲಿಸಲು ಪ್ರಯತ್ನಿಸಿದಾಗ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದು ಜಲಜಾ ರಾಜೇಂದ್ರ ತೋಳಾರ್ ಕರೆ ನೀಡಿದರು.
ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ಪ್ಲಾಸ್ಟಿಕ್ ಮುಕ್ತ ಪರಿಸರ ಕುರಿತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜು ಪ್ರಾಂಶುಪಾಲ ಡಾ.ಶುಭಕರಾಚಾರಿ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ, ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಕುಂದಾಪ್ರ ಕಾರ್ಯಕ್ರಮ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ, ಅಂತಾರಾಷ್ಟ್ರೀಯ ಕರಾಟೆ ಪಟು ಕಿರಣ್ ಆಚಾರ್ಯ, ಕುಂದಾಪುರದ ಲಯನ್ಸ್ ಕ್ಲಬ್ ಕ್ರೌನ್ ಅಧ್ಯಕ್ಷ ದಿನಕರ ಶೆಟ್ಟಿ ಉಪಸ್ಥಿತರಿದ್ದರು.