More

    ಪೊಲೀಸರಿಂದ ಹಲ್ಲೆ ಆರೋಪಿಗಳ ರಕ್ಷಣೆ

    ಸಾಗರ: ನನ್ನ ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಸಾಗರ ಪೇಟೆ ಠಾಣೆ ಪೊಲೀಸರು ಕಾನೂನಿಂದ ತಪ್ಪಿಸಿಕೊಳ್ಳಲು ಅವಕಾಶ ಮಾಡಿಕೊಡುತ್ತಿದ್ದಾರೆ ಎಂದು ಪತಿ ನಾಗಭೂಷಣ್ ಆರೋಪಿಸಿದ್ದಾರೆ. ಠಾಣೆಯಲ್ಲಿ ಹಾಕಿರುವ ಸೆಕ್ಷನ್ ನ್ಯಾಯಾಲಯಕ್ಕೆ ಸಲ್ಲಿಸುವಾಗ ಕೈಬಿಡಲಾಗಿದೆ. ಕೆಲವು ಪೊಲೀಸರೇ ತಪ್ಪಿತಸ್ಥರನ್ನು ಬಚಾವ್ ಮಾಡಲು ಯಾವುದೋ ಆಮೀಷಕ್ಕೆ ಒಳಗಾಗಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಅಶೋಕ ರಸ್ತೆಯಲ್ಲಿರುವ ನಮ್ಮ ಮೊಬೈಲ್ ಶಾಪ್‌ನಲ್ಲಿ ಪತ್ನಿ ಚೈತ್ರಾ ಇರುವಾಗ ಕೆಲವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಗಡಿಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಒಡೆದು ಹಾಕಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದ್ದರು ಪೊಲೀಸರು ಪ್ರಕರಣ ದಾಖಲಿಸಿರಲಿಲ್ಲ. ಶಾಸಕ ಗೋಪಾಲಕೃಷ್ಣ ಬೇಳೂರು, ಎಸ್ಪಿಗೆ ವಿಷಯ ತಿಳಿಸಿದ ಮೇಲೆ ಪ್ರಕರಣ ದಾಖಲು ಮಾಡಿದ್ದಾರೆ. ಆದರೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವಾಗ ಅನೇಕ ಸೆಕ್ಷನ್‌ಗಳನ್ನು ಕೈಬಿಡಲಾಗಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ವಕೀಲ ಎಸ್.ಬಿ.ರಾಜೇಶ್, ಚೈತ್ರಾ ನಾಗಭೂಷಣ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts