ಬೆಳಗಾವಿ: ಮಕ್ಕಳ ಸಂರಕ್ಷಣೆಯ ವಿಶೇಷ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲ ಅಕಾರಿಗಳು ಕಾರ್ಯನಿರ್ವಹಿಸಬೇಕು. ಮಕ್ಕಳು ದೇಶದ ಆಸ್ತಿ, ಅವರ ರಕ್ಷಣೆ, ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಹೇಳಿದರು.
ಇಲ್ಲಿನ ಸುವರ್ಣ ವಿಧಾನಸೌಧ ಸೆಂಟ್ರಲ್ ಹಾಲ್‌ನಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ, ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆದ ಮಕ್ಕಳ ರಕ್ಷಣಾ ಕಾಯ್ದೆಗಳ ಅನುಷ್ಠಾನಗೊಳಿಸುವಲ್ಲಿ ಅಕಾರಗಳ ಪಾತ್ರ ಕುರಿತು ಬೆಳಗಾವಿ ವಿಭಾಗಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಎಲ್ಲ ವಲಯಗಳಲ್ಲಿ ಮಕ್ಕಳಿಗೆ ರಕ್ಷಣೆ ಒದಗಿಸಲು ಪ್ರತಿ ಇಲಾಖೆ ಕಾರ್ಯ ನಿರ್ವಹಿಸಬೇಕು. ಮೂರು ತಿಂಗಳಲ್ಲಿ ಕನಿಷ್ಠ ಒಂದು ಬಾರಿ ಮಕ್ಕಳ ರಕ್ಷಣೆ ಕುರಿತು ಸಭೆ ಆಯೋಜಿಸಬೇಕು. ಸಂಬಂಸಿದ ಇಲಾಖೆ ಅಕಾರಿಗಳು ಕಡ್ಡಾಯವಾಗಿ ಸಭೆಗಳಿಗೆ ಹಾಜರಿರಬೇಕು ಎಂದು ತಿಳಿಸಿದರು. ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸದಸ್ಯೆ ಅಪರ್ಣಾ ಕೊಳ್ಳಾ ಮಾತನಾಡಿ, ಮಕ್ಕಳ ಹಕ್ಕುಗಳನ್ನು ಸುಲಭವಾಗಿ ಅನುಷ್ಠಾನಗೊಳಿಸಲು ಕಾಯ್ದೆಗಳನ್ನು ಅರಿತುಕೊಳ್ಳಬೇಕು. ಚಿಕ್ಕೋಡಿಯಲ್ಲಿ ಮಕ್ಕಳ ರಕ್ಷಣೆಗಳ ಕುರಿತು ನೂತನವಾಗಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬ ಅಕಾರಿಯೂ ರಕ್ಷಣೆಗೊಂಡ ಮಕ್ಕಳ ಮೇಲೆ ನಿಗಾ ವಹಿಸಬೇಕು ಎಂದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸದಸ್ಯ ಕಾರ್ಯದರ್ಶಿ ಪಿ.ಮುರಳಿ ಮೋಹನ ರೆಡ್ಡಿ ಮಾತನಾಡಿ, ಮಕ್ಕಳು ಹೆಚ್ಚಾಗಿ ಮೊಬೆಲ್-ಟಿವಿ ವ್ಯಸನಿಗಳಾಗಿದ್ದಾರೆ. ಅವರಿಗೆ ತಿಳಿಹೇಳುವ ಕೆಲಸವಾಗಬೇಕು ಎಂದರು. ಮಹಿಳಾ ಕಲ್ಯಾಣ ಸಂಸ್ಥೆಯ ಯೋಜನಾ ಸಂಯೋಜಕಿ ಸುರೇಖಾ ಪಾಟೀಲ ಮಾತನಾಡಿ, ಮಕ್ಕಳ ವಲಸೆ, ಗುಳೆ, ಮಕ್ಕಳ ಸಾಗಾಣಿಕೆ, ಮಕ್ಕಳ ಭಿಕ್ಷಾಟನೆ ನಿರ್ಮೂಲನೆ, ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಕುರಿತು ಮಾಹಿತಿ ನೀಡಿದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಮಾತನಾಡಿದರು. ಮಕ್ಕಳ ವಿಶೇಷ ಪೊಲೀಸ್ ಘಟಕದ ನೋಡಲ್ ಅಕಾರಿ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಬಸರಗಿ, ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆ ಉಪ ನಿರ್ದೇಶಕ ಆರ್.ನಾಗರಾಜ್, ಜಿಲ್ಲಾ ಮಕ್ಕಳ ರಕ್ಷಣಾಕಾರಿ ಚಂದ್ರಶೇಖರ ಸುಖಸಾರೆ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಜಗದೀಶ್ ಸರಿಕರ ಇತರರಿದ್ದರು.