More

    ಕೆರೆ ಅಭಿವೃದ್ಧಿಯಿಂದ ಅಂತರ್ಜಲ ರಕ್ಷಣೆ

    ಮೂಡಿಗೆರೆ: ಗ್ರಾಮಗಳಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರು ಸಂಗ್ರಹಿಸುವುದರಿಂದ ಅಂತರ್ಜಲವನ್ನು ಬೇಸಿಗೆಯಲ್ಲಿ ಕಾಪಾಡಿಕೊಳ್ಳಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪಿ.ಶಿವಾನಂದ ಹೇಳಿದರು.
    ಗೋಣಿಬೀಡು ಸಮೀಪದ ಜಿ.ಹೊಸಳ್ಳಿಯ ದಿಣ್ಣೆಕೆರೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆರೆ ಅಭಿವೃದ್ಧಿ ಯೋಜನೆಯಲ್ಲಿ ಶುಕ್ರವಾರ ಕೆರೆ ಹೂಳೆತ್ತುವ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಆಯಾ ಗ್ರಾಮದಲ್ಲಿರುವ ಕೆರೆಗಳ ಹೂಳೆತ್ತಿ ಗ್ರಾಮಸ್ಥರಿಗೆ ಕುಡಿಯುವ ನೀರೊದಗಿಸಲು ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಕಾರ್ಯಕ್ರಮ ರೂಪಿಸಿದ್ದಾರೆ. ಕೃಷಿ ಜಮೀನು ಬರಡಾಗದಂತೆ ನೋಡಿಕೊಳ್ಳಬೇಕು ಎಂದರು.
    ಜನ, ಜಾನುವಾರುಗಳ ಕುಡಿಯುವ ನೀರಿಗೆ ಸಂಚಕಾರ ಉಂಟಾಗದಂತೆ ಬೇಸಿಗೆಯಲ್ಲಿ ಯೋಜನೆ ರೂಪಿಸಿ ಜನರಿಗೆ ನಿರೋದಗಿಸುವ ಕಾರ್ಯ ನಡೆಸಬೇಕೆಂದು ಸೂಚನೆ ನೀಡಿದ್ದಾರೆ ಅದರಂತೆ ದಿಣ್ಣೆಕೆರೆ ಗ್ರಾಮದಲ್ಲಿ ಬರಡಾಗಿರುವ ಕೆರೆಯ ಹೂಳೆತ್ತುವ ಕೆಲಸದಲ್ಲಿ ತೊಡಗಿದ್ದೇವೆ ಎಂದು ತಿಳಿಸಿದರು.
    ಗೋಣಿಬೀಡು ಗ್ರಾಪಂ ಅಧ್ಯಕ್ಷ ದಿನೇಶ್ ಮಾತನಾಡಿ, ಸರ್ಕಾರದಿಂದಾಗದ ಕೆಲ ಯೋಜನೆಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಡುತ್ತಿದ್ದಾರೆ. ದಿಣ್ಣೆಕೆರೆ ಗ್ರಾಮದಲ್ಲಿರುವ ಹಳೆಯ ಕೆರೆ ಅಭಿವೃದ್ಧಿಗೆಂದು ಸಮಿತಿ ರಚಿಸಲಾಗಿದೆ. ಗ್ರಾಮಸ್ಥರು ಮಾತ್ರವಲ್ಲದೆ ಧರ್ಮಸ್ಥಳದ ಯೋಜನೆಯ ಪ್ರಗತಿ ಬಂಧು ಒಕ್ಕೂಟ, ಸ್ವಸಹಾಯ ಗುಂಪುಗಳು, ಶೌರ್ಯ ವಿಪತ್ತು ತಂಡ ಜಂಟಿಯಾಗಿ ವಿವಿಧ ಗ್ರಾಮಗಳಲ್ಲಿ ಪ್ರತಿದಿನ ಹಲವಾರು ಜನಪರ ಕೆಲಸ ಮಾಡುತ್ತಿದ್ದಾರೆ. ಇದರಿಂದ ಬಹುತೇಕ ಸಮಸ್ಯೆಗಳಿಗೆ ಮುಕ್ತಿ ದೊರೆಯುತ್ತಿದೆ ಎಂದು ಹೇಳಿದರು.
    ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಚಿಪ್ರಗುತ್ತಿ ಪ್ರಶಾಂತ್ ಕೆರೆ ಹೂಳೆತ್ತುವ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕಿರಣ್, ಗ್ರಾಪಂ ಸದಸ್ಯರಾದ ದೀಪಕ್, ಚಂದ್ರಶೇಖರ್, ರಘು, ಧರ್ಮಸ್ಥಳ ಸ್ವಸಹಾಯ ಗುಂಪುಗಳ ಒಕ್ಕೂಟದ ಅಧ್ಯಕ್ಷ ರಂಜಿತ್, ಮೇಲ್ವಿಚಾರಕ ಗೋವಿಂದ ನಾಯಕ್, ತೇಜಸ್, ಗಿರೀಶ್, ದೀಪಕ್, ಕುಸುಮಾ ಶೆಟ್ಟಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts