More

    ಜಲಮೂಲ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

    ಕುಶಾಲನಗರ: ಪ್ರತಿಯೊಬ್ಬರೂ ಭವಿಷ್ಯದ ಪೀಳಿಗೆಗಾಗಿ ನೀರನ್ನು ಮಿತವಾಗಿ ಬಳುಸುವುದರ ಮೂಲಕ ಜಲ ಸಂರಕ್ಷಣೆಗಾಗಿ ಪಣ ತೊಡಬೇಕಿದೆ ಎಂದು ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್‌ನ ಜಿಲ್ಲಾ ನೋಡಲ್ ಅಧಿಕಾರಿ, ಮುಖ್ಯಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹೇಳಿದರು.


    ಕುಶಾಲನಗರ ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದೊಂದಿಗೆ ಶಾಂತಿಗಾಗಿ ನೀರು ಎಂಬ ಧ್ಯೇಯವಾಕ್ಯದೊಂದಿಗೆ ವಿಶ್ವ ಜಲ ದಿನ 2024 ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ಜಲ ಸಂರಕ್ಷಣಾ ಜಾಗೃತಿ ಆಂದೋಲನದಲ್ಲಿ ನೀರಿನ ಸಂರಕ್ಷಣೆಯ ಮಹತ್ವ ಕುರಿತು ಮಾಹಿತಿ ನೀಡಿ, ಜಲ ಸಂರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು.


    ನಿತ್ಯ ಬಳಸುವ ನೀರನ್ನು ಮರುಬಳಕೆ ಮಾಡಬೇಕು. ಮಿತಿಮೀರಿ ಕೊಳವೆ ಬಾವಿ ತೆಗೆಸುವುದರಿಂದ ಅಂತರ್ಜಲದ ಮಟ್ಟ ಕುಸಿಯುತ್ತಿದೆ. ಪ್ರಕೃತಿಯಲ್ಲಿ ಅಮೂಲ್ಯವಾದ ನೀರನ್ನು ಸಂರಕ್ಷಿಸುವ ದೃಷ್ಟಿಯಿಂದ ಜಲಮೂಲಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪ್ರೇಮಕುಮಾರ್ ಹೇಳಿದರು.
    ಪ್ರಕೃತಿಯ ಅತ್ಯಮೂಲ್ಯ ಸಂಪತ್ತಾದ ನೀರನ್ನು ಅಪವ್ಯಯ ಮಾಡದೇ ಭವಿಷ್ಯದ ದೃಷ್ಟಿಯಿಂದ ನೀರನ್ನು ಸಂಗ್ರಹಿಸಿಡಬೇಕಾಗಿದೆ. ಮಳೆಯ ನೀರು ಸಂಗ್ರಹ ಹಾಗೂ ಅಂತರ್ಜಲ ಸಂರಕ್ಷಣೆಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.


    ಪ್ರಸಕ್ತ ವರ್ಷ ಬೇಸಿಗೆಗೂ ಮುನ್ನ ಜೀವ ನದಿ ಕಾವೇರಿ ಸೇರಿದಂತೆ ನಾಡಿನ ಎಲ್ಲ ನದಿಗಳು, ಕೆರೆಗಳು ಹಾಗೂ ಜಲಮೂಲಗಳು ಕ್ಷೀಣಿಸುತ್ತಿವೆ. ಈ ದೆಸೆಯಲ್ಲಿ ಅಂತರ್ಜಲ ಮತ್ತು ಜಲಮೂಲಗಳ ಸಂರಕ್ಷಣೆ ದೃಷ್ಟಿಯಲ್ಲಿ ಜನರಲ್ಲಿ ನೀರಿನ ಮಿತ ಬಳಕೆ ಮತ್ತು ಜಲ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

    ಜಲ ದಿನದ ಮಹತ್ವ ಕುರಿತು ಮಾತನಾಡಿದರು. ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಎನ್.ಸುಜಾತಾ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯಾ, ಸಿಬ್ಬಂದಿ ಎಂ.ಉಷಾ, ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts