More

    ಕರೊನಾ ವಾರಿಯರ್ಸ್ ವೇತನ ಹೆಚ್ಚಿಸಿ

    ಬೀದರ್: ಕುಟುಂಬದಿಂದ ದೂರವುಳಿದು ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಕರೊನಾ ವಾರಿಯರ್ಸ್ಗಳಾದ ಶುಶ್ರೂಷಾಧಿಕಾರಿ ಹಾಗೂ ಪೊಲೀಸ್ ನೌಕರರ ವೇತನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.
    ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿದ ಪ್ರಮುಖರು, ಶುಶ್ರೂಷಾಧಿಕಾರಿಗಳು ಕರೊನಾ ವಿರುದ್ಧ ತಮ್ಮ ಕುಟುಂಬ ಹಾಗೂ ಮಕ್ಕಳನ್ನು ಬಿಟ್ಟು ಕೆಲಸ ನಿರ್ವಹಿಸುತ್ತಿದ್ದಾರೆ. ಅದೇ ರೀತಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯ ಮಾಡುತ್ತಿದ್ದಾರೆ. ಹೀಗಾಗಿ ಇವರ ವೇತನ ಹೆಚ್ಚಳಕ್ಕೆ ಸರ್ಕಾರ ಕ್ರಮ ಕೈಗೊಂಡು ಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಿದರು.
    ಸರ್ಕಾರಿ ಆಸ್ಪತ್ರೆಯ ಕೆಲ ವೈದ್ಯರು ತಮ್ಮ ಆದ ಖಾಸಗಿ ಆಸ್ಪತ್ರೆ ನಡೆಸುತ್ತ ರೋಗಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ನೀವು ಇಲ್ಲಿ ಚೇತರಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಎಂದು ಕಳುಹಿಸುತ್ತಾರೆ. ಇಂಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಮಿತಿ ರಾಜ್ಯಾಧ್ಯಕ್ಷ ಕ್ರಿಸ್ಟಫರ್, ಜಿಲ್ಲಾಧ್ಯಕ್ಷ ಅಶ್ವಿನಕುಮಾರ, ಜಾನ್ ಫರ್ನಾಂಡಿಸ್, ಗೌರೀಶ್ ಕಿರಣ, ಭರತ ವರ್ಮಾ, ದೇವೇಂದ್ರ, ಸಲೋಮನ್, ಜಾಕೋಬ್, ಸ್ಯಾಮಸನ್ ಗುರುದಾಸನ್ ಇತರರಿದ್ದರು. ಬೇಡಿಕೆ ಸಂಬಂಧ ರಾಜ್ಯಪಾಲರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts