More

    ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಅವ್ಯವಹಾರ, ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಿಂದ ಆರೋಪ

    ಮಂಗಳೂರು: ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಪ್ರಾಮಾಣಿಕವಾಗಿ ನಡೆಯುತ್ತಿದ್ದ ಸ್ಮಾರ್ಟ್ ಸಿಟಿ ಕಾಮಗಾರಿ ಇಂದು ಗೊಂದಲದ ಗೂಡಾಗಿದೆ. ಸ್ಮಾರ್ಟ್ ಸಿಟಿಯ ನೈಜ ಕಾಮಗಾರಿಗಳು ನಡೆಯುತ್ತಿಲ್ಲ. ಭ್ರಷ್ಟಾಚಾರ, ಅವ್ಯವಹಾರ ನಡೆಯುತ್ತಿದೆ ಎಂಬ ಮಾತು ಕೇಳಿಬರುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು.

    ಮಹಾನಗರ ಪಾಲಿಕೆ ಆಡಳಿತ ವೈಫಲ್ಯ, ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತ, ಆಡಳಿತ ದುರ್ಬಳಕೆ ವಿರೋಧಿಸಿ ದ.ಕ ಜಿಲ್ಲಾ ಕಾಂಗ್ರೆಸ್‌ನ ಮಂಗಳೂರು ನಗರ ಉತ್ತರ, ದಕ್ಷಿಣ ಮತ್ತು ಸುರತ್ಕಲ್ ಬ್ಲಾಕ್ ವತಿಯಿಂದ ಮಂಗಳವಾರ ಮನಪಾ ಕಚೇರಿ ಮುಂಭಾಗ ಪ್ರತಿಭಟನೆಯಲ್ಲಿ ಮಾತನಾಡಿದರು. ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಸ್ಮಾರ್ಟ್ ಸಿಟಿ ಕುರಿತ ಜನರ ನಿರೀಕ್ಷೆಗಳು ಮಣ್ಣು ಪಾಲಾಗಿವೆ. ಆದ್ದರಿಂದ ಕಾಂಗ್ರೆಸ್ ಹೋರಾಟ ಆರಂಭಿಸಿದ್ದು, ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸುವ ಕೆಲಸ ನಿರಂತರ ಮಾಡಲಿದೆ ಎಂದರು.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಪಾಲಿಕೆ ಪ್ರತಿಪಕ್ಷ ನಾಯಕ ಅಬ್ದುಲ್ ರವೂಫ್, ಸದಸ್ಯ ಶಶಿಧರ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಲೀಂ, ಸದಾಶಿವ ಶೆಟ್ಟಿ, ವಿಶ್ವಾಸ್ ಕುಮಾರ್ ದಾಸ್, ಮುಖಂಡರಾದ ಮಿಥುನ್ ರೈ, ಸುರೇಶ್ ಬಲ್ಲಾಳ್, ಮಹಮ್ಮದ್ ಕುಂಜತ್ತಬೈಲ್, ಜೆಸಿಂತಾ ವಿಜಯ ಆಲ್ಫ್ರೆಡ್, ಸುರೇಶ್ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.

    ಮಹಾನಗರ ಪಾಲಿಕೆ ವತಿಯಿಂದ ಸಾಮಾನ್ಯ ಕೆಲಸಗಳನ್ನು ಸ್ಮಾರ್ಟ್ ಸಿಟಿಯಿಂದ ನಿರ್ವಹಿಸಲಾಗುತ್ತಿದೆ. ಹಳೇ ಬಂದರು, ನದಿ ಕಿನಾರೆ ಪ್ರದೇಶ ಸೇರಿದಂತೆ ಜಲಾಭಿಮುಖವಾಗಿ ಸ್ಮಾರ್ಟ್ ಸಿಟಿ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿತ್ತು. ಆದರೆ ಪ್ರಸ್ತುತ ರಸ್ತೆ, ಫುಟ್‌ಪಾತ್ ಅಗೆಯುವುದು ಮೊದಲಾದ ಕೆಲಸಗಳಿಗೆ ಸೀಮಿತವಾಗಿದೆ. ಯುವ ಸಮುದಾಯದ ಉದ್ಯೋಗಕ್ಕೆ ಪೂರಕವಾಗಿ ನದಿ, ಸಮುದ್ರ ತೀರದಲ್ಲಿ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿವೆ. ಸರಿಯಾಗಿ ಯೋಜನೆ ಅನುಷ್ಠಾನ ಮಾಡದಿದ್ದರೆ ನಿರಂತರ ಪ್ರತಿಭಟನೆ ನಡೆಸಲಾಗುವುದು.
    – ಜೆ.ಆರ್.ಲೋಬೊ, ಮಾಜಿ ಶಾಸಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts