ಬಿಸಿಯೂಟ ತಯಾರಕರ ಪ್ರತಿಭಟನೆ

ಮೈಸೂರು: ವೇತನ ಏರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್, ಎಐಟಿಯುಸಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳು ಮೊಳಗಿದವು.

ಕನಿಷ್ಠ ಮಾಸಿಕ ವೇತನವನ್ನು 18000 ರೂ. ನೀಡಬೇಕು. ಬಿಸಿಯೂಟ ಪೂರೈಕೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವ ಚಿಂತನೆಯನ್ನು ಕೈಬಿಡಬೇಕು. ಸೇವಾ ಭದ್ರತೆ ಕಲ್ಪಿಸಬೇಕು. ಬಿಸಿಯೂಟ ತಯಾರಕರನ್ನು ಶಾಲಾ ಸಿಬ್ಬಂದಿಯನ್ನಾಗಿ ಪರಿವರ್ತಿಸಬೇಕು. ಕಾರ್ಮಿಕರೆಂದು ಪರಿಗಣಿಸಿ ಕಾರ್ಮಿಕ ಕಾಯ್ದೆಯಡಿ ತರಬೇಕು… ಹೀಗೆ ಮತ್ತಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.