More

    ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಪಟ್ಟು

    ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
    ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಕಾರ್ಯ ಆರಂಭಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರಜಾ ವಿಮೋಚನಾ ಚಳವಳಿ (ಸ್ವಾಭಿಮಾನ) ಅಧ್ಯಕ್ಷ ಮುನಿಆಂಜಿನಪ್ಪ ಎಚ್ಚರಿಕೆ ನೀಡಿದರು.
    ದೇವನಹಳ್ಳಿಯ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಪುತ್ಥಳಿ ನಿರ್ಮಾಣ ಸಂಬಂಧ 5 ವರ್ಷದ ಹಿಂದೆಯೇ ಯೋಜನೆ ರೂಪಿಸಲಾಗಿದೆ. ಆದರೆ ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ ಎಂದು ದೂರಿದರು.
    ಜಗತ್ತು ಕಂಡ ಮಹಾ ಮಾನವತಾವಾದಿ ಸಂವಿಧಾನ ಶಿಲ್ಪಿ ಅಂಬೇಡ್ಕರ್, ಸಂವಿಧಾನದ ಮೂಲಕ ತಳ ಸಮುದಾಯಗಳಿಗೆ ನ್ಯಾಯ ದೊರಕಿಸಿಕೊಡಲು ಜೀವನವನ್ನೇ ಮೀಸಲಿಟ್ಟಿದ್ದರು. ಆದರೆ ಇಂದಿನ ವ್ಯವಸ್ಥೆ ಅವರನ್ನು ಗೌರವಿಸುವುದರಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದು ನೋವಿನ ಸಂಗತಿ ಎಂದರು.
    ಜಿಲ್ಲಾಡಳಿತ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಸಮನ್ವಯತೆ ಮತ್ತು ಇಚ್ಛಾಶಕ್ತಿ ಕೊರತೆಯಿಂದ ಪುತ್ಥಳಿ ನಿರ್ಮಾಣ ಕಾಮಗಾರಿ ನನೆಗುದಿಗೆ ಬಿದ್ದಿದೆ. ಅಂಬೇಡ್ಕರ್ ಜನ್ಮ ದಿನದಂದು ಪುತ್ಥಳಿ ಅನಾವರಣಕ್ಕೆ ಸಿದ್ಧವಾಗದಿದ್ದರೆ ಅಮರಣಾಂತ ಉಪವಾಸ ಸತ್ಯಗ್ರಹ ನಡೆಸಲಾಗುವುದು ಎಂದರು.
    ವಿಪಿಸಿ ನಗರ ಜಿಲ್ಲಾಧ್ಯಕ್ಷ ಅಯೂಬ್ ಖಾನ್ ಮಾತನಾಡಿ, 5 ವರ್ಷದಿಂದ ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಕಾರ್ಯಕ್ಕೆ ಹೋರಾಟ ಮಾಡಿದ್ದರಿಂದ ಜನರ ಕಣ್ಣೊರೆಸಲು ಜಿಲ್ಲಾಡಳಿತ ಪುತ್ಥಳಿ ನಿರ್ಮಾಣಕ್ಕೆ ಕಲ್ಲುಗಳನ್ನು ತಂದು ಹಾಕಿದ್ದು ಬಿಟ್ಟರೆ ಪುತ್ಥಳಿ ನಿರ್ಮಾಣಕ್ಕೆ ಮನಸ್ಸು ಮಾಡುತ್ತಿಲ್ಲ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಪುತ್ಥಳಿ ನಿರ್ಮಾಣಕ್ಕೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದರು.
    ಈ ಹೋರಾಟ ಸಾಂಕೇತಿಕವಾಗಿ ಮಾಡಲಾಗಿದೆ ಈ ಹೋರಾಟಕ್ಕೆ ಅಧಿಕಾರಿಗಳು ಎಚ್ಚೆತ್ತು ಆದಷ್ಟು ಬೇಗ ಪುತ್ಥಳಿ ನಿರ್ಮಾಣ ಕಾಮಗಾರಿ ಪೂರ್ಣ ಗೊಳಿಸದಿದ್ದರೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ದೇವನಹಳ್ಳಿ ತಾಲೂಕು ಅಧ್ಯಕ್ಷ ಸೋಲೂರು ನಾಗರಾಜ್ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts