More

    ಬೀದಿ ಬದಿ ಅಂಗಡಿ ತೆರವಿಗೆ ವಿರೋಧ

    ವಿಜಯವಾಣಿ ಸುದ್ದಿಜಾಲ ಆನೇಕಲ್
    ತಾಲೂಕಿನ ಚಂದಾಪುರದಲ್ಲಿ ಬೀದಿಬದಿ ಅಂಗಡಿ ತೆರವುಗೊಳಿಸುವುದನ್ನು ಕೂಡಲೇ ಸ್ಥಗಿತಮಾಡಬೇಕು ಎಂದು ಒತ್ತಾಯಿಸಿ ಪುರಸಭೆ ಮುಂಭಾಗ ಬೀದಿಬದಿ ವ್ಯಾಪಾರಿಗಳ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
    ಸಿಐಟಿಯು ರಾಜ್ಯ ಕಾರ್ಯದರ್ಶಿ ಬಿ.ಎನ್.ಮಂಜುನಾಥ್ ಮಾತನಾಡಿ, ಬೀದಿಬದಿ ವ್ಯಾಪಾರಿಗಳ ಪೈಕಿ ಬಹುತೇಕರು ಬಡವರಾಗಿದ್ದು, ಒಂದು ಹೊತ್ತಿನ ಊಟಕ್ಕಾಗಿ ಬೆಳಗಿನಿಂದ ಸಂಜೆವರೆಗೂ ದುಡಿಯುತ್ತಾರೆ. ಆದರೆ, ಪುರಸಭೆಯಿಂದ ಏಕಾಏಕಿ ರಸ್ತೆಯ ಬದಿಯ ಅಂಗಡಿಗಳನ್ನು ತೆರವುಗೊಳಿಸುವುದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತದೆ. ಆದ್ದರಿಂದ ವ್ಯಾಪಾರಿಗಳಿಗೆ ಪರ್ಯಾಯ ಜಾಗ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
    ಸಿಐಟಿಯು ತಾಲೂಕು ಪ್ರಧಾನ ಕಾರ್ಯದರ್ಶಿ ಜಿ.ಪಿ.ಸುನೀಲ್ ಮಾತನಾಡಿ, ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ, ಗುರುತಿನ ಚೀಟಿ ಮತ್ತು ವ್ಯಾಪಾರದ ಪರವಾನಗಿ ನೀಡಬೇಕು. ಅವಶ್ಯವಿರುವ ಕುಡಿಯುವ ನೀರು, ಶೌಚಗೃಹ, ಅಂಗಡಿಗಳಿಗೆ ಆಶ್ರಯದ ವ್ಯವಸ್ಥೆ ಮಾಡಬೇಕು. ಪ್ರತಿಯೊಬ್ಬ ಬೀದಿಬದಿ ವ್ಯಾಪಾರಿಗೂ ಆತ್ಮನಿರ್ಭರ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಬೇಕು. ಕೇಂದ್ರ ಸರ್ಕಾರ ಬೀದಿಬದಿ ವ್ಯಾಪಾರಿಗಳ ಜೀವನಾಧಾರ ಸಂರಕ್ಷಣಾ ಕಾಯ್ದೆ 2014 ರೂಪಿಸಿದೆ. ಈ ಕಾಯ್ದೆಯಲ್ಲಿನ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts