More

    ಅತ್ತಿಬೆಲೆ ಗಡಿಯಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಹೋರಾಟ

    • ವಿಜಯವಾಣಿ ಸುದ್ದಿಜಾಲ ಆನೇಕಲ್
      ತಮಿಳುನಾಡು ಸರ್ಕಾರ ಲೋಕಸಭೆ ಚುನಾವಣಾ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಕಾರ್ಯಗವಾಗಲು ಬಿಡುವುದಿಲ್ಲ ಎಂದು ಘೋಷಣೆ ಮಾಡಿರುವುದನ್ನು ಖಂಡಿಸಿ ಅತ್ತಿಬೆಲೆ ಗಡಿಯಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥದೇವ ನೇತೃತ್ವದಲ್ಲಿ ಅತ್ತಿಬೆಲೆ ಗಡಿ ಗೋಪುರದ ಸಮೀಪ ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಲಾಯಿತು.
      ಕನ್ನಡ ಚಳವಳಿ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ, ಸ್ಟಾಲಿನ್ ಸರ್ಕಾರ ಮೇಕೆದಾಟು ಯೋಜನೆ ಮಾಡಲು ಬಿಡುವುದಿಲ್ಲ ಎಂದು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಇದನ್ನು ೋಷಣೆಯನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
      ಚುನಾವಣೆಗೆ ಮುನ್ನ ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆಯನ್ನು ಮಾಡಲು ಪಾದಯಾತ್ರೆ ಮಾಡಿದ್ದರು. ಆದರೆ, ಅಧಿಕಾರಕ್ಕೆ ಬಂದ ನಂತರ ಈ ಯೋಜನೆಯನ್ನು ಡಿ.ಕೆ.ಶಿವಕುಮಾರ್ ಮರೆತ್ತಿದ್ದಾರೆ. ಜತೆಗೆ ರಾಜ್ಯ ಸರ್ಕಾರ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಬಿಡುತ್ತಿದ್ದು, ಇದನ್ನು ನಿಲ್ಲಿಸಬೇಕು. ಬೆಂಗಳೂರಿನ ಜನ ನೀರಿಲ್ಲದೆ ಪರಿತಪಿಸುವಂತಾಗಿದೆ. ಕೆಆರ್‌ಎಸ್ ಡ್ಯಾಂ ಖಾಲಿಯಾಗುತ್ತಿದ್ದು, ರಾಜ್ಯ ಸರ್ಕಾರ ಇಲ್ಲಿನ ಜನರ ಪರವಾಗಿ ನಿಂತು, ಕಠಿಣವಾದ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ. ಅಧಿಕಾರ ಕಳೆದುಕೊಳ್ಳಲು ಸಿದ್ಧರಿದ್ದೇವೆ. ಆದರೆ, ಕಾವೇರಿ ನೀರನ್ನು ಬಿಡೋದಿಲ್ಲ ಎಂದು ಘೋಷಣೆ ಮಾಡುವ ಧೈರ್ಯ ಇಲ್ಲಿನ ಜನಪ್ರತಿನಿಧಿಗಳಿಗೆ ಇಲ್ಲ ಎಂದು ಕಿಡಿಕಾರಿದರು.
      ಕನ್ನಡ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಗೌರೀಶ್, ಕನ್ನಡ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ, ಮುಖಂಡರಾದ ಮುಭಾರಕ್, ಕೋದಂಡರಾಮ, ವಿಜಯಲಕ್ಷ್ಮೀ, ನಾರಾಯಣಸ್ವಾಮಿ, ಆರ್.ಮಧುಕುಮಾರ್, ಆರ್.ಸತೀಶ್‌ರಾಜು, ಪುನಾವರ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts