More

    ಸ್ವ ಕ್ಷೇತ್ರದಲ್ಲೇ ಪೇಚಿಗೆ ಸಿಲುಕಿದ ಉಸ್ತುವಾರಿ

    ವಿಜಯವಾಣಿ ಸುದ್ದಿಜಾಲ ಚನ್ನರಾಯಪಟ್ಟಣ
    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ರೈತರು ಧಿಕ್ಕಾರ ಕೂಗಿ ಪ್ರತಿಭಟಿಸಿದ ಪ್ರಕರಣ ನಡೆದಿದ್ದು, ಸ್ವ ಕ್ಷೇತ್ರದಲ್ಲಿಯೇ ಉಸ್ತುವಾರಿ ಸಚಿವರು ತೀವ್ರ ಮುಖಭಂಗ ಎದುರಿಸುವಂತಾಯಿತು.
    ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಗ್ರಾಮದ ವೃತ್ತದಲ್ಲಿ ಮತ ಪ್ರಚಾರದ ವೇಳೆ ಸಚಿವರು ಭಾಷಣ ಪ್ರಾರಂಭಿಸಿದಾಗ, ಭೂ ಸ್ವಾಧೀನ ವಿರೋಧಿ ಹೋರಾಟನಿರತ ರೈತರು ಹಸಿರು ಬಾವುಟ ಪ್ರದರ್ಶಿಸಿ ರಾಜಕೀಯ ಪಕ್ಷಗಳ ಧೋರಣೆ ಖಂಡಿಸುವ ನಿಟ್ಟಿನಲ್ಲಿ ಪ್ರತಿಭಟಿಸಿದರು. ಇದರಿಂದ ಪೇಚಿಗೆ ಸಿಲುಗಿದ ಕಾಂಗ್ರೆಸ್ ಮುಖಂಡರು ಪ್ರತಿಭಟನಾನಿರತ ರೈತರನ್ನು ಸಮಾಧಾನ ಮಾಡಲು ಜಿಪಂ ಮಾಜಿ ಅಧ್ಯಕ್ಷ ಚನ್ನಹಳ್ಳಿ ಬಿ.ರಾಜಣ್ಣ ಅವರನ್ನು ಕಳುಹಿಸಿದರೂ, ಸಂಧಾನ ವಿಫಲವಾಗಿ ಹೋರಾಟ ಇನ್ನಷ್ಟು ತೀವ್ರಗೊಂಡ ಹಿನ್ನೆಲೆಯಲ್ಲಿ ಮತ ಪ್ರಚಾರ ಸಭೆ ಮೊಟಕುಗೊಳಿಸಲಾಯಿತು.
    ಸಚಿವರ ಆಶ್ವಾಸನೆ:
    ಭೂ ಸ್ವಾಧೀನ ವಿರೋಧಿ ರೈತರ ಧರಣಿ ಸ್ಥಳಕ್ಕೆ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರೊಂದಿಗೆ ತೆರಳಿದ ಸಚಿವ ಕೆ.ಎಚ್.ಮುನಿಯಪ್ಪ ರೈತರೊಂದಿಗೆ ಮಾತನಾಡಿ,ನನ್ನಿಂದ ತಪ್ಪಾಗಿದೆ, ನಿಮ್ಮ ವಿಚಾರದಲ್ಲಿ ವಿವಿಧ ಕಾರಣಗಳಿಂದ ತಡವಾಗಿದ್ದು, ಏ.26ರ ಲೋಕಸಭಾ ಚುನಾವಣೆಯ ನಂತರ ಪ್ರಾಮಾಣಿಕವಾಗಿ ಮುಖ್ಯಮಂತ್ರಿಗಳು, ಕೈಗಾರಿಕಾ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು’ ಎಂದು ಆಶ್ವಾಸನೆ ನೀಡಿದರು. ಚುನಾವಣೆ ಬಹಿಷ್ಕಾರ ಮಾಡಂತೆ ಸಚಿವರು ಮನವಿ ಮಾಡಲು ಯತ್ನಿಸಿದ ವೇಳೆ ರೈತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲಾಗದೆ ತಡವರಿಸಿದರು.ಬಿಜೆಪಿ ಸರ್ಕಾರದಲ್ಲಿ 72 ರೈತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ, ಪೊಲೀಸರಿಂದ ದಬ್ಬಾಳಿಕೆ ಮಾಡಿದ್ದರು ಎಂದು ರೈತರು ಕಣ್ಣೀರಾಕಿದರು.
    .


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts