ಹೊಳೆನರಸೀಪುರ: ಪಟ್ಟಣದಲ್ಲಿ ಮುಸ್ಲಿಮರು ಎನ್ಆರ್ ಸಿ, ಎನ್ ಪಿ ಆರ್, ಹಾಗೂ ಸಿಎಎ ವಿರೋಧಿಸಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿ ಚಿಕ್ಕ ಮಸೀದಿಯಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ಪೇಟೆ ಮುಖ್ಯ ರಸ್ತೆ, ಡಾ. ಅಂಬೇಡ್ಕರ್ ವೃತ್ತ ಹಾಗೂ ಮಹಾತ್ಮ ಗಾಂಧಿ ವೃತ್ತದ ಮುಖಾಂತರ ಸಾಗುತ್ತಾ ಪ್ರತಿಭಟನೆ ನಡೆಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ತೆರಳಿದರು.