More

    ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

    ಕುಶಾಲನಗರ: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದಲ್ಲಿ ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

    ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಮೂಲಕ ತೆರಳಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಸಿದರು. ಬಳಿಕ ಶಿರಸ್ತೇದಾರ್ ಅನಿತಾ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

    ರೈತರು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ಮಾಡಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿಲ್ಲ. ಮೋದಿ ನೇತೃತ್ವದ ಸರ್ಕಾರ ರೈತ ವಿರೋಧಿ, ಮಾನವ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಆರೋಪಿಸಿದರು.

    ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ವಿ.ಜೆ.ನವೀನ್ ಕುಮಾರ್, ಮಂಜುನಾಥ್ ಗುಂಡೂರಾವ್, ನಟೇಶ್ ಗೌಡ, ಫಿಲೋಮಿನಾ, ಜೋಸೆಫ್ಬ್ ವಿಕ್ಟರ್ ಸೊನ್ಸ್, ರಾಜೀವ್, ಚಂದ್ರಶೇಖರ್, ಟಿ.ಬಿ.ಜಗದೀಶ್, ಚಂದ್ರಶೇಖರ್, ಕುಂಜ್ಞಿ ಕುಟ್ಟಿ, ಹರೀಶ್, ಪ್ರಮೋದ್ ಮುತ್ತಪ್ಪ, ಪ್ರಕಾಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts