More

    ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

    ಮಳವಳ್ಳಿ: ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ಪ್ರತಿಭಟನೆ ರ‌್ಯಾಲಿ ನಡೆಸಲಾಯಿತು.

    ರ‌್ಯಾಲಿ ಬಳಿಕ ತಾಲೂಕು ಕಚೇರಿ ಮುಂದೆ ನಡೆದ ಧರಣಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಎನ್.ಎಲ್.ಭರತ್‌ರಾಜ್ ಮಾತನಾಡಿ, ರೈತ ಚಳವಳಿಯನ್ನು ಧಮನ ಮಾಡಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಖಂಡಿಸುವುದರ ಜತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಗಟ್ಟಬೇಕು, ದುಡಿಯುವ ಜನರ ಶೋಷಣೆ ತಪ್ಪಿಸಿ, ಉದ್ಯೋಗ ಸೃಷ್ಟಿ ಮಾಡಬೇಕೆಂದು ಒತ್ತಾಯಿಸಿದರು.

    ಕೇಂದ್ರ ಸರ್ಕಾರದ ನೀತಿಗಳು ರೈತ, ಕಾರ್ಮಿಕರು, ಮತ್ತು ಜನಸಾಮಾನ್ಯರ ವಿರುದ್ಧವಾಗಿದ್ದು, ಬಂಡವಾಳಿಗರ ಪರವಾಗಿ ರೂಪಿಸಿರುವುದಲ್ಲದೆ ಅಗತ್ಯ ವಸ್ತುಗಳ ಬೆಲೆ ಶೇ.30 ರಷ್ಟು ಹೆಚ್ಚಾಗಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಸಿಗುತ್ತಿಲ್ಲ. ಸಾಲಬಾಧೆ ತೀವ್ರಗೊಂಡಿದೆ. ಹಸಿವು, ಆತ್ಮಹತ್ಯೆ, ವಲಸೆ ಹೆಚ್ಚಳಗೊಂಡಿದೆ. ದೆಹಲಿಯಲ್ಲಿ ಪ್ರಾರಂಭವಾಗಿರುವ ರೈತರ ಚಳವಳಿಯನ್ನು ಹತ್ತಿಕ್ಕುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಕಿಡಿಕಾರಿದರು.

    ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು. ಕಾರ್ಮಿಕರು ದಿನಕ್ಕೆ 12 ಗಂಟೆಗಳು ಕೆಲಸ ಮಾಡಬೇಕೆಂಬ ಅವೈಜ್ಞಾನಿಕ ಹಾಗೂ ಶೋಷಣೆಯ ಕ್ರಮಕ್ಕೆ ಕಡಿವಾಣ ಹಾಕಬೇಕು. ಉದ್ಯೋಗಾವಕಾಶ ಹೆಚ್ಚಿಸಿ ದುಡಿಯುವ ಕೈಗಳಿಗೆ ಕೆಲಸ ನೀಡಬೇಕು. ರಾಷ್ಟ್ರೀಯ ನಗದೀಕರಣ ದಾರಿ ಹೆಸರಿನಲ್ಲಿ ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ನಿಲ್ಲಿಸಬೇಕು. ದೆಹಲಿಯಲ್ಲಿ ಚಳವಳಿ ನಡೆಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಕಿರುಕುಳ ನಿಲ್ಲಬೇಕು ಎಂದು ಉಪ ತಹಸೀಲ್ದಾರ್ ಕುಮಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

    ಪ್ರತಿಭಟನೆಯಲ್ಲಿ ಬಿ.ಎಂ.ಶಿವಮಲ್ಲಯ್ಯ, ಎಚ್.ಕೆ.ತಿಮ್ಮೇಗೌಡ, ಎನ್.ಲಿಂಗರಾಜಮೂರ್ತಿ, ಮಹದೇವಮ್ಮ, ಆನಂದ್, ಬಸವರಾಜು, ಹನುಮಗೌಡ ಸೇರಿದಂತೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts