ಡಿಕೆಸು ವಿರುದ್ಧ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗೆ ಖಂಡನೆ

P Rajeev
Published on

ಬೆಂಗಳೂರು: ಲೋಕಸಭೆ ಸದಸ್ಯ ಡಿ.ಕೆ.ಸುರೇಶ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆಗ್ರಹಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಭಟನಾನಿರತ ಕಾರ್ಯಕರ್ತರ ಮೇಲೆ ಪೊಲೀಸರ ತೀವ್ರ ಹಲ್ಲೆ ಖಂಡನೀಯ. ಸಂವಿಧಾನವಿರೋಧಿ, ರಾಷ್ಟ್ರವನ್ನು ಒಡೆಯುವಂಥ ಹೇಳಿಕೆಯನ್ನು ಕೊಟ್ಟಂಥ ವ್ಯಕ್ತಿ ಸುರಕ್ಷಿತವಾಗಿರುತ್ತಾರೆ. ಆದರೆ ರಾಷ್ಟ್ರದ ಏಕತೆ, ಸಮಗ್ರತೆಗೆ ನಿಮ್ಮ ಹೇಳಿಕೆ ಧಕ್ಕೆ ಉಂಟು ಮಾಡುತ್ತದೆ ಎನ್ನುವ ಹಾಗೂ ಶಾಂತಿಯುತ ಪ್ರತಿಭಟನೆ ಮಾಡಲು ಹೋದವರ ಮೇಲೆ ಲಾಠಿಚಾರ್ಜ್ ಮಾಡಿದ್ದಲ್ಲದೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ಮೊದಲು ತನ್ನ ಸಂಸದನಿಗೆ ಬುದ್ಧಿ ಮಾತು ಹೇಳಲಿ. ಅದರ ಬದಲು ದೇಶ ವಿರೋಧಿ ಹೇಳಿಕೆ ಕೊಟ್ಟ ಸಂಸದರನ್ನು ರಕ್ಷಣೆ ಮಾಡುವಂತಹ ನೀಚ ಕೆಲಸ ಮಾಡಬಾರದು. ಬಂಧಿತ ಬಿಜೆಪಿ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು. ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಸರ್ಕಾರ ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಬೆಂಕಿ ಹತ್ತಿಕೊಳ್ಳಲಿದೆ. ಈ ಅಸಹನೆಯ ಬೆಂಕಿಗೆ ಕಾಂಗ್ರೆಸ್ ಸುಟ್ಟು ಹೋಗಲಿದೆ ಎಂದು ರಾಜೀವ್ ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net