More

    ಜೆಎನ್​ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಕೇಂದ್ರ ಸರ್ಕಾರದ ಷಡ್ಯಂತ್ರ; ಕಲಬುರಗಿಯಲ್ಲಿ ಪ್ರತಿಭಟನಾಕಾರರ ಆರೋಪ

    ಕಲಬುರಗಿ: ದೆಹಲಿ ಜವಾಹರ್​ ಲಾಲ್​ ನೆಹರು ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಹಿಂಸಾಚಾರವನ್ನು ವಿರೋಧಿಸಿ ಕ್ಯಾಂಪಸ್​ ಫ್ರಂಟ್​ ಆಫ್​ ಇಂಡಿಯಾ ನೇತೃತ್ವದಲ್ಲಿ ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

    ಪ್ರತಿಭಟನಾಕಾರರು ಎಬಿವಿಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೆಎನ್​ಯು ವಿವಿಯಲ್ಲಿ ಉದ್ದೇಶಪೂರ್ವಕವಾಗಿಯೇ ದಾಂದಲೆ ಮಾಡಿಸಲಾಗುತ್ತಿದೆ. ಎಬಿವಿಪಿ ಗೂಂಡಾಗಳ ಮೂಲಕ ಅಲ್ಲಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಇದು ಕೇಂದ್ರ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ ಎಂದು ಆರೋಪಿಸಿದರು.

    ಹಲ್ಲೆಕೋರರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಜೆಎನ್​ಯು ವಿದ್ಯಾರ್ಥಿಗಳ ಹಿತರಕ್ಷಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts