More

    ಶಾಸಕ ಪಿ.ಟಿ.ಪರಮೇಶ್ವರ ನಾಯ್ಕೆಗೆ ಪ್ರತಿಭಟನೆ ಬಿಸಿ

    • ಸ್ಥಳೀಯ ಜನಪ್ರತಿನಿಧಿಗಳ ಕಡೆಗಣನೆಗೆ ಖಂಡನೆ
    • ಶಾಲಾ ಕೊಠಡಿಗಳ ಉದ್ಘಾಟನೆಗೆ ಆಗಮಿಸಿದ್ದ ಶಾಸಕ

    ಹೂವಿನಹಡಗಲಿ: ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ಬುಧವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಗಳ ಉದ್ಘಾಟನೆಗೆ ಆಗಮಿಸಿದ್ದ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕಗೆ ಸ್ಥಳೀಯರ ಪ್ರತಿಭಟನೆ ಬಿಸಿ ತಟ್ಟಿತು.
    ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಬೈಕ್ ರ‍್ಯಾಲಿಯೊಂದಿಗೆ ಗ್ರಾಮ ಪ್ರವೇಶಿಸುತ್ತಿದ್ದಂತೆ ಹತ್ತಾರು ಜನರು ಗುಂಪು ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಶಾಸಕರ ವಿರುದ್ಧ ಧಿಕ್ಕಾರ ಮೊಳಗಿಸಿದರು.
    ಅದನ್ನು ಲೆಕ್ಕಿಸದೇ ಮುನ್ನಡೆ ಶಾಸಕರ ಕಾರು ಹಿಂಬಾಲಿಸಿದ ಪ್ರತಿಭಟನಾಕಾರರು ಶಾಲಾ ಆವರಣಕ್ಕೂ ಪ್ರವೇಶಿಸಿದರು. ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಸ್ಥಳೀಯ ಜನಪ್ರತಿನಿಧಿಗಳನ್ನು ಆಹ್ವಾನಿಸದೇ, ಕಡೆಗಣಿಸಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
    ಪ್ರತಿಭಟನೆ ಮಧ್ಯೆಯೇ ಕೊಠಡಿಗಳ ಉದ್ಘಾಟನೆ, ಶಾಸಕರು, ಅಧಿಕಾರಿಗಳಿಗೆ ಸನ್ಮಾನವೂ ಸಾಂಕೇತಿಕವಾಗಿ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts