More

    ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ; ಕೇಂದ್ರ ಸರ್ಕಾರದ ವಿರುದ್ಧ ಸಿಪಿಐಎಂ ಕಾರ್ಯಕರ್ತರ

    ತುಮಕೂರು: ಕಳೆದ 15 ದಿನಗಳಿಂದ ನಿರಂತರವಾಗಿ ಹೆಚ್ಚಳವಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ) ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

    ನಗರದ ಜೆ.ಸಿ.ರಸ್ತೆಯಲ್ಲಿ ಸಿಪಿಐಎಂ ಕಾರ್ಯಕರ್ತರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲಬೆಲೆ ಕಡಿಮೆ ಇದ್ದರೂ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ನಿಯಂತ್ರಣ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಘೋಷಣೆಗಳನ್ನು ಕೂಗಿದರು.

    ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಕಡಿಮೆ ಇದ್ದರೂ, ಕೇಂದ್ರ ಸರ್ಕಾರ ಭಾರತದಲ್ಲಿ ತೈಲ ಬೆಲೆ ಹೆಚ್ಚಿಸುವ ಮೂಲಕ ಜನರ ಮೇಲೆ ಬರೆ ಎಳೆದಿದೆ. ಇತರ ರಾಷ್ಟ್ರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅತ್ಯಂತ ಕಡಿಮೆ ಇದ್ದು ಕೇಂದ್ರ ಸರ್ಕಾರವೂ ಕಮ್ಮಿ ಬೆಲೆಗೆ ಪೆಟ್ರೋಲ್, ಡೀಸೆಲ್ ನೀಡಬೇಕು ಎಂದು ಒತ್ತಾಯಿಸಿದರು.

    ಸಿಪಿಎಂ ಕಾರ್ದರ್ಶಿ ಮಂಡಳಿ ಸದಸ್ಯ ಬಿ.ಉಮೇಶ್ ಮಾತನಾಡಿ, ಪ್ರಧಾನಿ ಮೋದಿ ಜನತೆಗೆ ಭರವಸೆಗಳ ಮಹಾಪೂರವನ್ನೇ ಭಾಷಣಗಳ ಮೂಲಕ ಹರಿಸುತ್ತಿದ್ದಾರೆ. ಕಾರ್ಪೋರೇಟ್ ಕಂಪನಿಗಳ ಕುಳಗಳು ಮಾತ್ರ ಮೋದಿ ಕಣ್ಣಿಗೆ ಕಾಣುತ್ತಿದ್ದಾರೆ. ಕರೊನಾ ಸೋಂಕಿನಿಂದ ರೈತರು ತಾವು ಬೆಳೆದ ಬೆಳೆಗೆ ಬೆಲೆ ಇಲ್ಲದೆ ಮಾರಾಟ ಮಾಡಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ.

    ಹಾಗಾಗಿ, ಆರ್ಥಿಕ ಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಬರೀ ಮಾತಿನಲ್ಲಿ ಸೌಧ ಕಟ್ಟುವುದನ್ನು ನಿಲ್ಲಿಸಬೇಕು ಎಂದು ಹರಿಹಾಯ್ದರು. ಸಿಪಿಎಂ ನಗರ ಕಾರ್ಯದರ್ಶಿ ಎಸ್. ರಾಘವೇಂದ್ರ ಮೊದಲಾದವರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts