More

    ಆರ್‌ಟಿಐ ಕಾರ್ಯಕರ್ತನ ವಿರುದ್ಧ ಠಾಣೆ ಮುಂದೆ ಪ್ರತಿಭಟನೆ


    ಮಡಿಕೇರಿ : ರೌಡಿಶೀಟರ್ ಹ್ಯಾರಿಸ್ ಎಂಬಾತ ಆರ್‌ಟಿಐ ಕಾರ್ಯಕರ್ತನೆಂಬ ಸೋಗು ಹಾಕಿಕೊಂಡು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ, ಕಾಲೇಜು ಪ್ರಾಂಶುಪಾಲರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದು, ಬ್ಲಾಕ್‌ಮೇಲ್ ಮಾಡುತ್ತಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿ ಬುಧವಾರ ನಾಪೋಕ್ಲು ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಯಿತು.


    ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಮಾತನಾಡಿ, ರೌಡಿಶೀಟರ್ ಹ್ಯಾರಿಸ್ ಸರ್ಕಾರಿ ಅಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಕೂಡಲೇ ಆತನನ್ನು ಗಡಿಪಾರು ಮಾಡಬೇಕು ಎಂದು ಕಿಡಿಕಾರಿದರು.


    ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೆಟೋಳಿರ ಹರೀಶ್ ಪೂವಯ್ಯ ಮಾತನಾಡಿ, ಹ್ಯಾರೀಸ್ ವಿರುದ್ಧ ಹಲವು ದೂರುಗಳು ಇವೆ. ಅಸ್ಪತ್ರೆಯಲ್ಲಿ ವೈದ್ಯರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಕೂಡಲೇ ಅವರ ವಿರುದ್ಧ ಕ್ರಮವಾಗಬೇಕು ಎಂದು ಆಗ್ರಹಿಸಿದರು.


    ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಕಾರಿ ಡಾ.ಪೂವಯ್ಯ ಮಾತನಾಡಿ, ಹ್ಯಾರೀಸ್ ಪದೇ ಪದೆ ಕಿರುಕುಳ ನೀಡುತ್ತಿದ್ದಾರೆ. ಅನವಶ್ಯಕವಾಗಿ ದೂರು ಸಲ್ಲಿಸುವುದು, ಮೂಗರ್ಜಿ ಬರೆಯುವುದು, ದೂರವಾಣಿ ಮುಖಾಂತರ ಸುಳ್ಳು ಪುಕಾರು ಹಬ್ಬಿಸುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದನ್ನು ಮಾಡುತ್ತಿದ್ದಾರೆ. ಈ ಹಿಂದೆ ದೂರು ದಾಖಲಿಸಿದ್ದಾಗ ಕ್ಷಮಾಪಣಾ ಪತ್ರವನ್ನೂ ಬರೆದುಕೊಟ್ಟಿದ್ದಾರೆ. ಆದರೆ ಮತ್ತೆ ಮತ್ತೆ ಈ ರೀತಿಯಾಗಿ ತೊಂದರೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.


    ಗ್ರಾಮ ಪಂಚಾಯಿತಿ ಸದಸ್ಯ ಬಿ.ಎಂ.ಪ್ರತೀಪ್ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿ ಹ್ಯಾರಿಸ್ ದಬ್ಬಾಳಿಕೆ ಮಿತಿಮೀರಿದೆ. ಆರ್‌ಟಿಐ ಕಾರ್ಯಕರ್ತನ ಸೋಗಿನಲ್ಲಿ ಎಲ್ಲರಿಗೂ ತೊಂದರೆ ನೀಡುತ್ತಿದ್ದಾನೆ ಎಂದು ಕಿಡಿಕಾರಿದರು. ಠಾಣಾಕಾರಿ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು.
    ಗ್ರಾಮ ಪಂಚಾಯಿತಿ ಸದಸ್ಯ ಮಾಚೇಟ್ಟಿರ ಕುಶು ಕುಶಾಲಪ್ಪ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಂ .ಎಚ್.ಅಬ್ದುಲ್ ರಹಿಮಾನ್, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಳಿಯಡ ಅಂಬಿಕಾ ಕಾರ್ಯಪ್ಪ, ಜೆಡಿಎಸ್ ಮುಖಂಡ ಎಂ.ಎ ಮನ್ಸೂರು ಆಲಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts