ಫ್ಲೆಕ್ಸ್‌ಗಳನ್ನು ತೆರವು ಖಂಡಿಸಿ ಪ್ರತಿಭಟನೆ

blank

ಮೈಸೂರು: ಅಂಬೇಡ್ಕರ್ ಜಯಂತಿಗೆ ಶುಭಾಶಯ ಕೋರಿದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿರುವುದನ್ನು ಖಂಡಿಸಿ ಮಾನಸ ಗಂಗೋತ್ರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟ ಸೇರಿದಂತೆ ಇನ್ನಿತರ ವಿದ್ಯಾರ್ಥಿಗಳು ಕ್ಲಾಕ್ ಟವರ್ ಬಳಿ ಜಮಾವಣೆಗೊಂಡು ಫ್ಲೆಕ್ಸ್ ತೆರವುಗೊಳಿಸಿರುವ ಕ್ರಮವನ್ನು ಖಂಡಿಸಿದರು.
ಆವರಣದ ಕ್ಯಾಂಟೀನ್ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಪದಾಧಿಕಾರಿಗಳು, ವಿದ್ಯಾರ್ಥಿ ಮುಖಂಡರು ಶುಭಾಶಯ ಕೋರಿದ್ದ ಫ್ಲೆಕ್ಸ್ ಅಳವಡಿಸಲಾಗಿತ್ತು. ಬುಧವಾರ ಈ ಎಲ್ಲವನ್ನು ತೆರವುಗೊಳಿಸಲಾಗಿತ್ತು. ಆದರೆ ನಮಗೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ತೆರವುಗೊಳಿಸಿದ್ದಾರೆ. ಫ್ಲೆಕ್ಸ್‌ಗಳನ್ನು ಬಿಚ್ಚಿ ಎಲ್ಲೆಂದರಲ್ಲಿ ಕಸದಲ್ಲಿ ಬಿಸಾಡಿದ್ದಾರೆ. ಇದು ಅಂಬೇಡ್ಕರ್‌ಗೆ ಮಾಡಿದ ಅಪಮಾನ ಎಂದು ವಿದ್ಯಾರ್ಥಿಗಳು ಖಂಡಿಸಿದರು.
ರಾತ್ರಿಯವರೆಗೂ ನಡೆದ ಧರಣಿ ಸ್ಥಳಕ್ಕೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಭೇಟಿ ನೀಡಿ ಮುಂದೆ ಇಂತಹ ಅಚಾತುರ್ಯ ಆಗದಂತೆ ಎಚ್ಚರ ವಹಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ತೆಗೆದುಕೊಂಡರು.

Share This Article

ಮಳೆಗಾಲದಲ್ಲಿ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿಕೊಳ್ಳಿ! rainy season

rainy season: ಮಳೆಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು ಅಥವಾ ಇತರ ಶಿಲೀಂಧ್ರ ಸೋಂಕುಗಳು ಸುಲಭವಾಗಿ ಹರಡುತ್ತವೆ. ಮಳೆಗಾಲದಲ್ಲಿ…

ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips

Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…