'ಲಡಾಖ್‌'ನಲ್ಲಿ ಆರನೇ ವೇಳಾಪಟ್ಟಿ ವಿರೋಧಿಸಿ ಪ್ರತಿಭಟನೆ; ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ| ladakh protest

ladak
Published on

ಲಡಾಖ್‌; ಕೇಂದ್ರ ಸರ್ಕಾರ ಮತ್ತು ಆಡಳಿತವು ತಮ್ಮ ಬೇಡಿಕೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಆರೋಪಿಸಿ ಲಡಾಖ್‌ನ ಲೇಹ್‌ನಲ್ಲಿ ಇಂದು (ಸೆ.24) ಎಲ್‌ಎಬಿಯ ಸಂಘಟನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ, ಲೆಹ್‌ನಲ್ಲಿರುವ ಆಡಳಿತಾರೂಢ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ್ದಾರೆ. ನಗರದಲ್ಲಿನ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗುತ್ತಿರುವ ವಿಡಿಯೋವೊಂದು ಹೊರಬಿದ್ದಿದ್ದು, ಅದರಲ್ಲಿ ಆವರಣದಿಂದ ದಟ್ಟ ಹೊಗೆ ಮೇಲೇರುತ್ತಿರುವುದನ್ನು ಕಾಣಬಹುದಾಗಿದೆ. ಲಡಾಖ್‌ನ ಭೂಮಿ, ಸಂಸ್ಕೃತಿ ಮತ್ತು ಸಂಪನ್ಮೂಲಗಳ ರಕ್ಷಣೆಗಾಗಿ ಲಡಾಖ್‌ ಅನ್ನು ಆರನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು, ಲಡಾಖ್‌ಗೆ ರಾಜ್ಯತ್ವ ಸ್ಥಾನಮಾನ ನೀಡಬೇಕು ಎಂಬ ಇನ್ನೂ ಇತರ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟು 2019ರ ನಂತರದಿಂದ ಲಡಾಖ್‌ನಲ್ಲಿ ನಿರಂತರವಾಗಿ ಪ್ರತಿಭಟನೆ ಮಾಡಲಾಗುತ್ತಿದೆ.

ಇನ್ನೂ ಈ ಗಲಬೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ವಾಹನಕ್ಕೂ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಪ್ರತೀಕಾರವಾಗಿ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಅಶ್ರುವಾಯು ಮತ್ತು ಲಾಠಿ ಪ್ರಹಾರ ನಡೆಸಿದ್ದಾರೆ. ಪ್ರದೇಶದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಈ ಉಪವಾಸ ಸತ್ಯಾಗ್ರಹದ ನೇತೃತ್ವ ವಹಿಸಿದ್ದಾರೆ. ಸೆಪ್ಟೆಂಬರ್ 10 ರಿಂದ 35 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹದಿನೈದು ಜನರಲ್ಲಿ ಇಬ್ಬರ ಸ್ಥಿತಿ ನಿನ್ನೆ ಹದಗೆಟ್ಟ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರಿಂದ ಪ್ರತಿಭಟನೆಗಳು ಭುಗಿಲೆದ್ದಿವೆ ಎನ್ನಲಾಗಿದೆ.

(ಏಜೆನ್ಸೀಸ್)

ಲಡಾಖ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ನ ಸೆಕ್ಷನ್ 163 ಅನ್ನು ವಿಧಿಸಿದ್ದಾರೆ. ಸೆಕ್ಷನ್ 163 ರ ಅಡಿಯಲ್ಲಿ ಐದು ಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ಜೊತೆಗೆ, ಪೂರ್ವಾನುಮತಿ ಇಲ್ಲದೆ ಯಾವುದೇ ಮೆರವಣಿಗೆಗಳನ್ನು ನಡೆಸಲು ಅನುಮತಿ ಇಲ್ಲ. ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗುವ ಯಾವುದೇ ಹೇಳಿಕೆಗಳನ್ನು ಸಹ ನಿಷೇಧಿಸಲಾಗಿದೆ. ಇನ್ನೂ ಲಡಾಖ್ ಜನರ ಬೇಡಿಕೆಗಳ ಕುರಿತು ಮಾತುಕತೆಗಳನ್ನು ಪುನರಾರಂಭಿಸಲು ಕೇಂದ್ರದಿಂದ ಅಕ್ಟೋಬರ್ 6 ರಂದು ಲಡಾಖ್ ಪ್ರತಿನಿಧಿಗಳೊಂದಿಗೆ ಸಭೆ ಕರೆಯಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net