More

    ನಾಳೆ ಮೋದಿ ಉದ್ಘಾಟಿಸಲಿರುವ ರೈಲ್ವೇ ನಿಲ್ದಾಣದ ಮುಂದೆ ಇಂದು ಪ್ರತಿಭಟನೆ; ಪ್ರಧಾನಿಗೆ ಕಪ್ಪು ಬಾವುಟ ತೋರುವ ಎಚ್ಚರಿಕೆ

    ಬೆಳಗಾವಿ: ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ಬೆಳಗಾವಿಯ ರೈಲು ನಿಲ್ದಾಣದ ಮುಂದೆ ಇಂದು ಪ್ರತಿಭಟನೆ ನಡೆಯುತ್ತಿದೆ. ದಲಿತ ಸಂಘಟನೆಗಳು ಇಂದು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ಷೇಪ ಏನು ಎಂಬುದನ್ನು ವ್ಯಕ್ತಪಡಿಸಿದ್ದಾರೆ.

    ರೈಲು ನಿಲ್ದಾಣದ ಬಳಿ ಜಮಾಯಿಸಿದ ದಲಿತ ಸಂಘಟನೆಗಳ ಮುಖಂಡರು ಹಳಿಗಳ ಮೇಲೆ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ರೈಲು ನಿಲ್ದಾಣದ ಮುಂದೆ ಡಾ.ಅಂಬೇಡ್ಕರ್ ಅವರ ಮೂರ್ತಿಯನ್ನು ಅಳವಡಿಸದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.

    ಇದನ್ನೂ ಓದಿ: ಪತಿ ಹೃದಯಾಘಾತಕ್ಕೆ ಬಲಿ; ಒಂದೇ ಉರುಳಿಗೆ ಮಗನೊಂದಿಗೆ ಕೊರಳೊಡ್ಡಿ ಪ್ರಾಣ ಬಿಟ್ಟ ಪತ್ನಿ

    ಪ್ರತಿಭಟನೆ ವೇಳೆ ಪೋಲಿಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದವೂ ನಡೆದಿದ. ಅಲ್ಲದೆ ಅಂಬೇಡ್ಕರ್ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡದಿದ್ದರೆ ನಾಳೆ ಪ್ರಧಾನಿ ಮೋದಿಗೆ ಕಪ್ಪು ಬಾವುಟ ತೋರುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

    ಇದನ್ನೂ ಓದಿ: ಮಂಡ್ಯದಲ್ಲಿ ಭೀಕರ ಮರ್ಡರ್​: ರುಂಡ ಕತ್ತರಿಸಿ, ಶವ ಪೀಸ್ ಪೀಸ್ ಮಾಡಿ ನಾಲೆಗೆಸೆದ ಹಂತಕರು

    ಶಿವಾಜಿ ಹಾಗೂ ಡಾ. ಅಂಬೇಡ್ಕರ್ ಮೂರ್ತಿ ಅಳವಡಿಸಲೇಬೇಕೆಂದು ಪಟ್ಟು ಹಿಡಿದು ರೈಲು ನಿಲ್ದಾಣದ ಮುಂದೆ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಸ್ಥಳದಲ್ಲಿ ವ್ಯಾಪಕ ಪೋಲಿಸ್ ಬಂದೋಬಸ್ತ್ ಮುಂದುವರಿದಿದೆ.

    ಇದನ್ನೂ ಓದಿ: ಆಸ್ತಿ ಆಸೆಗೆ ಒಂದೇ ಮನೆಯ ನಾಲ್ವರ ಕೊಲೆ; ಮಕ್ಕಳಿಬ್ಬರ ಪ್ರಾಣ ಉಳಿಸಿತೇ ನಿದ್ರೆ-ಆಟ!?

    ಈ ಮುಂಚೆ ರೈಲ್ವೆ ನಿಲ್ದಾಣ ಮುಂದೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮೂರ್ತಿ ಇದ್ದಿದ್ದು, ರೈಲ್ವೆ ನಿಲ್ದಾಣ ಕಾಮಗಾರಿ ವೇಳೆ ಅಭಿವೃದ್ಧಿ ಹೆಸರಲ್ಲಿ ಡಾ.ಅಂಬೇಡ್ಕರ್ ಮೂರ್ತಿ ತೆರವುಗೊಳಿಸಿದ್ದ ರೈಲ್ವೆ ಅಧಿಕಾರಿಗಳು, ಈಗ ಮತ್ತೆ ರೈಲ್ವೆ ನಿಲ್ದಾಣ ಮುಂದೆ ಅಂಬೇಡ್ಕರ್ ಮೂರ್ತಿ ಅನಾವರಣಕ್ಕೆ ಅನುಮತಿ ಕೇಳುತ್ತಿದ್ದಾರೆ ಎನ್ನಲಾಗಿದೆ.

    19ರ ಯುವಕ ಡ್ಯಾನ್ಸ್​ ಮಾಡುತ್ತಲೇ ಕುಸಿದು ಬಿದ್ದು ಸಾವು; ಸಂಭ್ರಮದ ಸಂದರ್ಭದಲ್ಲೇ ಶೋಕ

    ಡ್ಯಾನ್ಸ್ ವೇಳೆಯೇ ವಿದ್ಯಾರ್ಥಿ ಕುಸಿದು ಬಿದ್ದು ಸಾವು; ಪ್ರತಿಭಟನೆಗೂ ಸಾವಿಗೂ ಸಂಬಂಧವಿಲ್ಲ: ಅಜೀಮ್​ ಪ್ರೇಮ್​ಜಿ ವಿವಿ ಸ್ಪಷ್ಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts