More

    ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ 21ರಂದು

    ರಟ್ಟಿಹಳ್ಳಿ: ಭೂಸುಧಾರಣೆ ಕಾಯ್ದೆ ತಿದ್ದುಪಡಿ ಮತ್ತು ವಿದ್ಯುತ್ ಖಾಸಗೀರಣಕ್ಕೆ ಮುಂದಾಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜು. 21ರಂದು ಹಾವೇರಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ತಿಳಿಸಿದರು.

    ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಸುದಾರಣೆ ಕಾಯ್ದೆ ತಿದ್ದುಪಡಿಯಿಂದ ರೈತರ ಜಮೀನುಗಳು ಶ್ರೀಮಂತರ ಪಾಲಾಗುತ್ತವೆ. ರೈತರು ಮತ್ತೆ ಗುಲಾಮಗಿರಿ ಜೀವನ ನಡೆಸಬೇಕಾಗುತ್ತದೆ. ಹಣದ ಆಸೆಗೆ ರೈತರು ಜಮೀನುಗಳನ್ನು ಮಾರಿದರೆ ಮತ್ತೆ ಭೂಮಿ ಪಡೆಯಲು ಸಾಧ್ಯವಿಲ್ಲ. ರೈತರಿಗೆ ಮಾರಕವಾಗಿರುವ ತಿದ್ದುಪಡಿ ಕಾಯ್ದೆಯನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದರು.

    ವಿದ್ಯುತ್ ಖಾಸಗೀಕರಣದಿಂದ ಮುಂದಿನ ದಿನಗಳಲ್ಲಿ ರೈತರ ಪಂಪ್​ಸೆಟ್​ಗಳಿಗೆ ಮೀಟರ್ ಅಳವಡಿಸಿ ಯುನಿಟ್​ನಂತೆ ವಿದ್ಯುತ್ ಬಿಲ್ ವಸೂಲಿ ಮಾಡಲಾಗುತ್ತದೆ. ಇದರಿಂದ ರೈತರಿಗೆ ಆರ್ಥಿಕ ನಷ್ಟವಾಗುತ್ತದೆ ಆದ್ದರಿಂದ ಸರ್ಕಾರ ಈ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿದರು.

    ರಟ್ಟಿಹಳ್ಳಿ ತಾಲೂಕು ಘಟಕದ ಅಧ್ಯಕ್ಷ ಶಂಕರಗೌಡ ಶಿರಗಂಬಿ ಮಾತನಾಡಿ, ಕಿಸಾನ್ ಸಮ್ಮಾನ ಯೋಜನೆಯಡಿ ಮತ್ತು ಮೆಕ್ಕೆಜೋಳ ಬೆಳೆದ ರೈತರಿಗೆ 5 ಸಾವಿರ ರೂ. ಪರಿಹಾರ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts