More

    ಸಿಡಿದೆದ್ದ ಹಿಂದೂಪರ ಕಾರ್ಯಕರ್ತರು: ಹರ್ಷ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

    ಬೆಂಗಳೂರು: ನಿನ್ನೆ ರಾತ್ರಿ ನಡೆದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಿಂದಾಗಿ ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇದರ ಬೆನ್ನಿಗೆ ರಾಜ್ಯಾದ್ಯಂತ ಹಿಂದೂಪರ ಕಾರ್ಯಕರ್ತರು ಸಿಡಿದೆದ್ದಿದ್ದು, ಹರ್ಷ ಕೊಲೆ ಖಂಡಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ.

    ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬಜರಂಗ ದಳ- ವಿಶ್ವ ಹಿಂದು ಪರಿಷತ್ ಜಂಟಿಯಾಗಿ ಪ್ರತಿಭಟನೆ ನಡೆಸಿದ್ದು, ಹರ್ಷ ಹಂತಕರನ್ನು ಕಠಿಣ ಶಿಕ್ಷೆಗೊಳಪಡಿಸಲು ಆಗ್ರಹಿಸಿದೆ. ಮಾತ್ರವಲ್ಲ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ರವಾನಿಸಿದೆ.

    ಇದನ್ನೂ ಓದಿ: ರೋಚಕ ರಕ್ಷಣಾ ಕಾರ್ಯಾಚರಣೆ; ಟ್ರೆಕ್ಕಿಂಗ್ ವೇಳೆ ಕಂದಕಕ್ಕೆ ಬಿದ್ದವನ ರಕ್ಷಣೆ

    ಕೋಲಾರದಲ್ಲಿ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆದಿದ್ದು, ಕೊಲೆಗಡುಕರನ್ನು ಶಿಕ್ಷಿಸುವಂತೆ ಒತ್ತಾಯಿಸಲಾಗಿದೆ. ಚಾಮರಾಜನಗರದಲ್ಲಿ ಹಿಂದು ಸಂಘಟನೆ ಒಕ್ಕೂಟ ಚಾಮರಾಜೇಶ್ವರ ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದೆ. ಮಾತ್ರವಲ್ಲ ಮುಸ್ಲಿಂ ಸಂಘಟನೆಗಳ ವಿರುದ್ಧ ಘೋಷಣೆ ಕೂಗಿ, ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದೆ.

    ಸಿಡಿದೆದ್ದ ಹಿಂದೂಪರ ಕಾರ್ಯಕರ್ತರು: ಹರ್ಷ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ
    ಧಾರವಾಡದಲ್ಲಿ ಬಜರಂಗದಳ, ವಿಎಚ್​ಪಿ ಪ್ರತಿಭಟನೆ

    ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆದಿದ್ದು, ಬಸವೇಶ್ವರ ವೃತ್ತದಲ್ಲಿ ಟಯರ್​​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದ ಪ್ರತಿಭಟನಾಕಾರರು, ಕೊಲೆಗಡುಕರನ್ನು ಕೂಡಲೇ ಬಂಧಿಸುವಂತೆ ಒತ್ತಾಯ ಮಾಡಿದರು.

    ಹರ್ಷ ಕೊಲೆ ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಸಿಡಿದೆದ್ದಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಇನ್ನೂ ಕೆಲವೆಡೆ ಪ್ರತಿಭಟನೆಗಳಿಗೆ ತಯಾರಿ ನಡೆಯುತ್ತಿದ್ದು, ಇನ್ನಷ್ಟು ಆಕ್ರೋಶ-ಆಗ್ರಹ ವ್ಯಕ್ತವಾಗುವ ಲಕ್ಷಣಗಳು ಗೋಚರಿಸಿವೆ.

    ಮದ್ವೆಯಾದ ಹತ್ತೇ ತಿಂಗಳಲ್ಲಿ ದುರಂತ; ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ…

    ಮಸೀದಿ-ಮಂದಿರಗಳ ಧ್ವನಿವರ್ಧಕದ ಶಬ್ದ ತಗ್ಗಿಸದಿದ್ದರೆ ಕಾನೂನುಕ್ರಮ: ಪೊಲೀಸ್ ಕಮಿಷನರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts