ಸಿಡಿದೆದ್ದ ಹಿಂದೂಪರ ಕಾರ್ಯಕರ್ತರು: ಹರ್ಷ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ನಿನ್ನೆ ರಾತ್ರಿ ನಡೆದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಿಂದಾಗಿ ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇದರ ಬೆನ್ನಿಗೆ ರಾಜ್ಯಾದ್ಯಂತ ಹಿಂದೂಪರ ಕಾರ್ಯಕರ್ತರು ಸಿಡಿದೆದ್ದಿದ್ದು, ಹರ್ಷ ಕೊಲೆ ಖಂಡಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬಜರಂಗ ದಳ- ವಿಶ್ವ ಹಿಂದು ಪರಿಷತ್ ಜಂಟಿಯಾಗಿ ಪ್ರತಿಭಟನೆ ನಡೆಸಿದ್ದು, ಹರ್ಷ ಹಂತಕರನ್ನು ಕಠಿಣ ಶಿಕ್ಷೆಗೊಳಪಡಿಸಲು ಆಗ್ರಹಿಸಿದೆ. … Continue reading ಸಿಡಿದೆದ್ದ ಹಿಂದೂಪರ ಕಾರ್ಯಕರ್ತರು: ಹರ್ಷ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ