More

    ಎಐಟಿಯುಸಿ ಕಾರ್ಯಕರ್ತರ ಪ್ರತಿಭಟನೆ

    ಚಿತ್ರದುರ್ಗ: ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಪ್ರೋತ್ಸಾಹಧನ, ಮಾಸಿಕ ಪಿಂಚಣಿ ಸೌಲಭ್ಯ ಜಾರಿಗೆ ಆಗ್ರಹಿಸಿ ಎಐಟಿಯುಸಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

    ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ದುಡಿಯುವ ವರ್ಗದ ಈ ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.

    ಸರ್ಕಾರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅನುಷ್ಠಾನ ಸಂಬಂಧ 3 ದಶಕ ಸುದೀರ್ಘವಾಗಿ ಶ್ರಮಿಸಿ ನಿವೃತ್ತಿಯಾದ ನಂತರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ವಯೋಸಹಜ ಕಾಯಿಲೆಯಿಂದಾಗಿ ಔಷಧೋಪಚಾರಕ್ಕೂ ತೊಂದರೆ ಆಗಿದೆ ಎಂದು ಅಳಲು ತೋಡಿಕೊಂಡರು.

    ನಿವೃತ್ತಿ ನಂತರ ಕನಿಷ್ಠ ಮಾಸಿಕ 5 ಸಾವಿರ ರೂ. ಪಿಂಚಣಿ ಹಾಗೂ ಸುಪ್ರೀಕೋರ್ಟ್ ತೀರ್ಪಿನಂತೆ ಪ್ರೋತ್ಸಾಹಧನ ಪಡೆಯಲು ಅರ್ಹರಾಗಿದ್ದು, ಜಾರಿಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

    ಜಿಲ್ಲಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಸುರೇಶ್‌ಬಾಬು, ಅಧ್ಯಕ್ಷೆ ಎಸ್.ಭಾಗ್ಯಮ್ಮ, ಪ್ರಧಾನ ಕಾರ್ಯದರ್ಶಿ ಜಮುನಾಬಾಯಿ, ಸಾವಿತ್ರಮ್ಮ, ರಾಧಮ್ಮ, ರತ್ನಮ್ಮ, ಮಹೇಶ್ವರಿ, ನಿರ್ಮಲಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts