More

    ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

    ಎಚ್‌ಎನ್‌ಎಸ್ ಸರ್ವೇ ಸಂದರ್ಭದಲ್ಲಿ ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಿ ಹಾಗೂ ತಂಡದಲ್ಲಿ ಸರ್ವೇ ನಡೆಸಲು ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು ಮಂಗಳವಾರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.


    ಎಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಹಲ್ಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸಿದರು.

    ಆಶಾಗಳಿಗೆ ಸೂಕ್ತ ಭದ್ರತೆ, ರಕ್ಷಣೆ ನೀಡುವಂತೆ ಆಗ್ರಹಿಸಿ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಚ್.ಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.

    ಮನವಿ ಮನವಿ ಸ್ವೀಕರಿಸಿ ಮಾತನಾಡಿದ ಡಾ.ಕೆ.ಎಚ್.ಪ್ರಸಾದ್, ನಡೆದ ಘಟನೆ ನೋವು ತರುವಂಥದ್ದು, ಮುಂದೆ ಈ ರೀತಿ ಘಟನೆ ಮರುಕಳಿಸದಂತೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಅಪರಾಧಿಗೆ ಕಾನೂನು ರೀತಿಯ ಶಿಕ್ಷೆ ದೊರೆಯಲು ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಚ್‌ಎನ್‌ಎಸ್ ಸರ್ವೇ ಮಾಡುವಾಗ ತಂಡದ ಹೊರತಾಗಿ ಯಾರೂ ಒಂಟಿಯಾಗಿ ಮಾಡಬೇಕಾಗಿಲ್ಲ. ಈ ಬಗ್ಗೆ ಸುತ್ತೋಲೆ ಹೊರಡಿಸುವುದಾಗಿ ಭರವಸೆ ನೀಡಿದರು.
    500ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


    ಮೈಸೂರು ನಗರ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಅಧ್ಯಕ್ಷೆ ಸೀಮಾ, ಮುಖಂಡರಾದ ಭಾಗ್ಯ, ಮಣಿಲಾ, ಕೋಮಲಾ, ಸುನೀತಾ, ಹೇಮಾ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts