21.7 C
Bengaluru
Tuesday, January 21, 2020

ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಹಿರೇಕೆರೂರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಜೆಪಿ ತಾಲೂಕು ಘಟಕದಿಂದ ಗುರುವಾರ ಪಟ್ಟಣದ ಸರ್ವಜ್ಞ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.

ತಹಸೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ಮುಂದುವರಿಸಿದ ಕಾರ್ಯಕರ್ತರು ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೊಷಣೆ ಕೂಗಿದರು.

ನೇತೃತ್ವ ವಹಿಸಿದ್ದ ಮಾಜಿ ಶಾಸಕ ಯು.ಬಿ. ಬಣಕಾರ ಮಾತನಾಡಿ, ರಟ್ಟಿಹಳ್ಳಿ- ಹಿರೇಕೆರೂರು ತಾಲೂಕುಗಳಲ್ಲಿ ಮುಂಗಾರು ಸಂಪೂರ್ಣ ವಿಫಲವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿರಾಗಲೀ, ಜಿಲ್ಲಾಧಿಕಾರಿಗಳಾಗಲಿ ಇಲ್ಲಿಗೆ ಆಗಮಿಸಿ ಸಮಸ್ಯೆ ಅರಿಯುವ ಹಾಗೂ ಪರಿಹಾರ ಒದಗಿಸುವ ಪ್ರಯತ್ನ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂಗಾರು ಹಂಗಾಮು ಪ್ರಾರಂಭವಾಗಿ ತಿಂಗಳು ಗತಿಸಿದರೂ ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬಿತ್ತನೆ ಮಾಡಿದ ಕೆಲವು ರೈತರು ಮಳೆ ಬಾರದ್ದಕ್ಕೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೆ ಅಂತಹ ರೈತರಿಗೆ ಪರಿಹಾರ ಒದಗಿಸಬೇಕು. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಯೋಜನೆ ಜಾರಿಗೊಳಿಸಿಲ್ಲ. ರಟ್ಟಿಹಳ್ಳಿ ತಾಲೂಕು ರಚನೆಯಾಗಿ 2 ವರ್ಷ ಗತಿಸಿದರೂ ಎಲ್ಲ ಇಲಾಖೆಯ ಕಾರ್ಯಾಲಯಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಕೂಡಲೆ ಎಲ್ಲ ಕಾರ್ಯಾಲಯಗಳು ಕಾರ್ಯಾರಂಭಿಸುವಂತೆ ಕ್ರಮ ಕೈಗೊಳ್ಳಬೇಕಿದೆ. ಎರಡೂ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ತಾಲೂಕು ಆಡಳಿತ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ತಾಲೂಕಿನಲ್ಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಕಳಪೆಯಿಂದ ಕೂಡಿವೆ. ಅರಣ್ಯ ಅಕ್ರಮ ಸಾಗುವಳಿದಾರರ ತಿರಸ್ಕೃತ ಅರ್ಜಿಗಳನ್ನು ಮರುಪಶೀಲಿಸಬೇಕು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕಾಗಮಿಸಿದ ತಹಸೀಲ್ದಾರ್ ರಿಯಾಜುದ್ದಿನ್ ಭಾಗವಾನ್, ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಯತ್ನಿಸಿದರೂ ಪ್ರಯೋಜವಾಗಲಿಲ್ಲ. ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಮಾಜಿ ಶಾಸಕ ಯು.ಬಿ. ಬಣಕಾರ ಪಟ್ಟುಹಿಡಿದರು.

ಸಂಜೆ 6.30ಕ್ಕೆ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಎಡಿಸಿ ತಿಪ್ಪೇಸ್ವಾಮಿ ಸ್ಥಳಕ್ಕಾಗಮಿಸಿ, ‘ಜುಲೈ 4ರಂದು ಅಧಿಕಾರಿಗಳ ಸಭೆ ಕರೆದು, ರ್ಚಚಿಸಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಜಿ.ಪಂ. ಸದಸ್ಯರಾದ ಸುಮಿತ್ರಾ ಪಾಟೀಲ, ಶಿವರಾಜ ಹರಿಜನ, ಎನ್.ಎಂ. ಈಟೇರ, ತಾ.ಪಂ. ಸದಸ್ಯರಾದ ಮಹೇಶ ಗುಬ್ಬಿ, ಸುಜಾತಾ ಕೊಟಗಿಮನಿ, ಕೆಎಂಎಫ್ ನಿರ್ದೇಶಕ ಹನುಮಂತಗೌಡ ಭರಮಣ್ಣನವರ, ಪ.ಪಂ. ಸದಸ್ಯರಾದ ಕಂಠಾಧರ ಅಂಗಡಿ, ಸುಧಾ ಚಿಂದಿ, ವಿಜಯಶ್ರೀ ಬಂಗೇರ, ರಮೇಶ ಕೋಡಿಹಳ್ಳಿ, ಕಂಠಾಧರ ಅಂಗಡಿ, ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಎಸ್.ಆರ್. ಅಂಗಡಿ, ಮಹಿಳಾ ಘಟಕದ ಅಧ್ಯಕ್ಷೆ ಲತಾ ಬಣಕಾರ, ಮುಖಂಡರಾದ ಎಸ್.ಬಿ. ಪಾಟೀಲ, ಪರಮೇಶಪ್ಪ ಹಲಗೇರಿ, ಶಿವಕುಮಾರ ತಿಪ್ಪಶೆಟ್ಟಿ, ಸುನಿತಾ ಕೊಡ್ಲೇರ, ನಿರ್ಮಲಾ ಗುಬ್ಬಿ, ನಿಂಗಪ್ಪ ಚಳಗೇರಿ, ಆನಂದಪ್ಪ ಹಾದಿಮನಿ, ಬಿರೇಶ ಹಾರ್ನಳ್ಳಿ, ಕೊಟ್ರೇಶ ಅಂಗಡಿ, ಕಾರ್ಯಕರ್ತರು ಇದ್ದರು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...