ಮೂಲಸೌಕರ್ಯಕ್ಕೆ ಪೌರಕಾರ್ಮಿಕರ ಗುತ್ತಿಗೆದಾರರ ಪ್ರತಿಭಟನೆ

blank

ಚಿಕ್ಕಮಗಳೂರು: ಮನೆ ಮನೆ ಕಸ ಸಂಗ್ರಹಿಸುವ ಗುತ್ತಿಗೆ ಪೌರಕಾರ್ಮಿಕರಿಗೆ ಮೂಲಭೂತ ಸೌಕರ್ಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಗುರುವಾರ ಪೌರಕಾರ್ಮಿಕರ ಗುತ್ತಿಗೆದಾರರ ಸಂಘದ ಮುಖಂಡರು ಪ್ರತಿಭಟನೆ ನಡೆಸಿ ಸೌಲಭ್ಯಕ್ಕೆ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಆರ್.ನಾಗರಾಜು, ಸತತ ಎರಡು ದಶಕಗಳಿಂದ ನಗರವ್ಯಾಪ್ತಿಯಲ್ಲಿ ಪ್ರಾಣದ ಹಂಗು ತೊರೆದು ಕಸಸಂಗ್ರಹಿಸುವ ಕಾರ್ಮಿಕರಿಗೆ ಇದುವರೆಗೂ ಯಾವುದೇ ರೀತಿ ಯಾದ ಸೌಲಭ್ಯಗಳು ಲಭಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈಗಾಗಲೇ ಕಾರ್ಮಿಕರಿಗೆ ಪಿಎಫ್, ಇಎಸ್‌ಐ ಹಾಗೂ ಬ್ಯಾಂಕ್ ಖಾತೆಯಿಲ್ಲ. ಇವುಗಳನ್ನು ಗಮನಿಸಿದರೆ ನಾವು ಕಾರ್ಮಿಕರೇ ಅಥವಾ ಜೀತದಾಳುಗಳೇ ಎಂಬುದು ತಿಳಿಯುತ್ತಿಲ್ಲ. ಈ ಬಗ್ಗೆ ಪೌರಾಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೌಲಭ್ಯ ಒದಗಿಸಲು ಅನೇಕ ಬಾರಿ ಅರ್ಜಿ ಸಲ್ಲಿಸಿದರೂ ಉತ್ತರ ಸಿಗುತ್ತಿಲ್ಲ ಎಂದು ದೂರಿದರು.
ಪ್ರತಿದಿನ ಮುಂಜಾನೆ ಗುತ್ತಿಗೆ ಪೌರಕಾರ್ಮಿಕರು ಅನೇಕ ರೋಗ ರುಜಿನದಿಂದ ಕೂಡಿರುವ ಕಸ ಸಂಗ್ರಹಿಸಬೇಕು. ಇದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದರೆ ನಗರಸಭೆ ಆರೋಗ್ಯ ಸೇವೆ ಒದಗಿಸದೇ ಕೇವಲ ವೇತನಕ್ಕಷ್ಟೇ ಸೀಮಿತಗೊಳಿಸಿದ್ದಾರೆ ಎಂದು ತಿಳಿಸಿದರು.
ನಗರ ಅತ್ಯಂತ ಸ್ವಚ್ಚತೆಯಿಂದ ಕೂಡಿರಲು ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕರಿಗೆ ಮೂಲ ಸೌಲಭ್ಯಗಳನ್ನು ಒದಗಿಸುತ್ತಿಲ್ಲ. ಈ ಕೆಲಸದಲ್ಲಿ ಆರೋಗ್ಯದ ಏರುಪೇರುಗಳು ಕಂಡುಬAದಲ್ಲಿ ಕುಟುಂಬವು ದಿಕ್ಕಾಪಾಲಾಗಲಿದೆ. ಮಕ್ಕಳ ವಿದ್ಯಾಭ್ಯಾಸ, ಬಾಡಿಗೆ ಸೇರಿದಂತೆ ಅನೇಕ ಖರ್ಚುಗಳು ಕಾರ್ಮಿಕರ ಕುಟುಂಬಕ್ಕಿದೆ ಎಂದು ಹೇಳಿದರು.
ಹೀಗಾಗಿ ಬೇಡಿಕೆ ಈಡೇರಿಕೆಗಾಗಿ ಸಲ್ಲಿಸಿರುವ ಅರ್ಜಿಗಳು ಪದೇ ಪದೇ ವಿಳಂಭವಾಗುತ್ತಿರುವ ಕಾರಣ ಪ್ರತಿಭಟನೆ ಮೂಲಕ ಜಿಲ್ಲಾಡಳಿತ ಹಾಗೂ ಪೌರಾಯುಕ್ತರನ್ನು ಎಚ್ಚರಿಸುವ ಕಾರ್ಯಕ್ಕೆ ಮುಂದಾಗಿz್ದೆÃವೆ ಎಂದು ತಿಳಿಸಿದರು.
ಗುತ್ತಿಗೆ ಪೌರಕಾರ್ಮಿಕರಿಗೆ ಶೀಘ್ರವೇ ನೇರಪಾವತಿ ಮಾಡಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ಕನಿಷ್ಟ ವೇತನ, ಪಿಎಫ್ ಮತ್ತು ಇಎಸ್‌ಐ ನೀಡಬೇಕು. ರಾಷ್ಟಿçÃಯ ಬ್ಯಾಂಕ್‌ನಲ್ಲಿ ನೌಕರರಿಗೆ ಖಾತೆ ತೆರೆಯಬೇಕು. ನಗರಸಭೆಯಿಂದ ಕಾರ್ಮಿಕರಿಗೆ ನೇರ ವೇತನ ನೀಡಬೇಕು ಹಾಗೂ ಗುರುತಿನ ಚೀಟಿ ವಿತರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ತನ್ವೀರ್, ಕಾರ್ಯದರ್ಶಿ ಸಿ.ಟಿ.ಆನಂದ್, ಖಜಾಂಚಿ ಮೋಹನ್, ಸದಸ್ಯರಾದ ಮಹೇಶ್, ಹನುಮಂತಪ್ಪ, ಮುಖಂಡರಾದ ಕೆ.ಟಿ.ರಾಧಾಕೃಷ್ಣ, ಮರ್ಲೆ ಅಣ್ಣಯ್ಯ, ಹರೀಶ್ ಮಿತ್ರ ಮತ್ತಿತರರಿದ್ದರು.

Share This Article

ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips

Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…

ಬೇಸಿಗೆಯಲ್ಲಿ ಸೌತೆಕಾಯಿ ಒಂದು ವರದಾನ.. ಆರೋಗ್ಯದ ಜತೆಗೆ ಸೌಂದರ್ಯವನ್ನೂ ತರುತ್ತದೆ.. Beauty Benefits Of Cucumber

ಬಿಸಿಲಿನಲ್ಲಿ ಸೌತೆಕಾಯಿ ತಿಂದು ಆರೋಗ್ಯ ಕಾಪಾಡಿಕೊಳ್ಳಿ Beauty Benefits Of Cucumber : ಸೌತೆಕಾಯಿಯು ಹಲವಾರು…

ಶನಿಯ ಅನುಗ್ರಹದಿಂದಾಗಿ ಈ 3 ರಾಶಿಯವರ ಜೀವನದಲ್ಲಿ ಎಂದಿಗೂ ಹಣದ ಕೊರತೆ ಇರುವುದಿಲ್ಲ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…