More

    ಸಾಮೂಹಿಕ ನಾಯಕತ್ವ ರೈತ ಸಂಘಟನೆಯಿಂದ ಪ್ರತಿಭಟನೆ

    ನಂಜನಗೂಡು: ರೈತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿರುವ ರಾಜ್ಯ ಸರ್ಕಾರದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಸಾಮೂಹಿಕ ನಾಯಕತ್ವ ರೈತ ಸಂಘಟನೆ ಕಾರ್ಯಕರ್ತರು ಬುಧವಾರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

    ತಾಲೂಕು ಕಚೇರಿ ಪ್ರವೇಶದ್ವಾರದಲ್ಲಿ ಧರಣಿ ಕುಳಿತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ತಕ್ಷಣ ಬಹಿರಂಗ ಕ್ಷಮೆಯಾಚಿಸುವಂತೆ ಆಗ್ರಹಿಸಿದರು.

    ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಆರ್.ವಿದ್ಯಾಸಾಗರ್ ಮಾತನಾಡಿ, ತಮ್ಮ ಸ್ವಂತ ದುಡಿಮೆ ಹಾಗೂ ಶ್ರಮದಿಂದ ಬದುಕುತ್ತಿರುವ ರೈತರನ್ನು ಪದೇಪದೆ ಬರಗಾಲ ಬರಲಿ ಎಂದು ಆಶಿಸುತ್ತಾರೆ ಎಂದು ಹೇಳುವ ಮೂಲಕ ಸಚಿವ ಶಿವಾನಂದ ಪಾಟೀಲ್ ಕೃಷಿಕರಿಗೆ ಅಪಮಾನವೆಸಗಿದ್ದಾರೆ. ರೈತರು ಯಾರದೇ ಹಂಗಿನಲ್ಲಿಯೂ ಬದುಕಲು ಇಚ್ಛಿಸಿದವರಲ್ಲ. ಡಾ.ಸ್ವಾಮಿನಾಥನ್ ಆಯೋಗದ ವರದಿಯಂತೆ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡಿದಲ್ಲಿ ರೈತರಿಗೆ ಉಚಿತ ವಿದ್ಯುತ್ ಹಾಗೂ ರಿಯಾಯಿತಿ ದರದ ಬಿತ್ತನೆ ಬೀಜ ಯಾವುದೂ ಬೇಕಿಲ್ಲ. ಆದರೆ ಆಡಳಿತಾರೂಢ ಸರ್ಕಾರಗಳಿಗೆ ಅಂತಹ ಇಚ್ಛಾಶಕ್ತಿಯಿಲ್ಲ. ಸ್ವಾರ್ಥಕ್ಕಾಗಿ ಅಧಿಕಾರವನ್ನು ಬಳಸಿಕೊಂಡು ಲೂಟಿ ಹೊಡೆಯುವ ರಾಜಕಾರಣಿಗಳಿಂದ ರೈತರಿಗೆ ಯಾವುದೇ ಸರ್ಟಿಫಿಕೇಟ್ ಬೇಕಿಲ್ಲ. ಹಿರಿಯ ಸಚಿವರಾಗಿ ಶಿವಾನಂದ ಪಾಟೀಲ್ ರೈತರನ್ನು ಅವಮಾನಪಡಿಸಿರುವುದು ಅಕ್ಷಮ್ಯ ಅಪರಾಧವಾಗಿದ್ದು, ತಕ್ಷಣ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

    ಪ್ರತಿಭಟಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಸತೀಶ್‌ರಾವ್, ಮಹದೇವಸ್ವಾಮಿ, ಮನುಕುಮಾರ್, ಮಹದೇವನಾಯಕ, ಮಹೇಶ್, ಕಾರ್ಯಕುಮಾರ್, ಕೆ.ಪಿ.ಮಹೇಶ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts