ದಾವಣಗೆರೆ: ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ನಂಬರ್ ಜೋಡಣೆ ಕೈಬಿಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ರೈತ ಸಂಘದ ಕಚೇರಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಗಾಂಧಿ ಸರ್ಕಲ್, ಜಯದೇವ ವೃತ್ತ ಹಾಗೂ ಅಂಬೇಡ್ಕರ್ ಸರ್ಕಲ್ ಮೂಲಕ ಬೆಸ್ಕಾಂ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಚೇರಿಗೆ ತೆರಳಿ, ಕೊಳವೆ ಬಾವಿಗಳಿಗೆ ಜಾರಿಗೊಳಿಸಿರುವ ಕಾನೂನು ಪ್ರತಿಗಳನ್ನು ಸುಟ್ಟುಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಕಾರ್ಯದರ್ಶಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಮಾತನಾಡಿ, ರಾಜ್ಯ ಸರ್ಕಾರದ ಆದೇಶದ ಮೇರೆಗೆ ಕೃಷಿ ಪಂಪ್‌ಸೆಟ್‌ಗೆ ಆಧಾರ್ ನಂಬರ್ ಜೋಡಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮೀಟರ್ ಅಳವಡಿಸುವ ಹುನ್ನಾರ ನಡೆಸಲಾಗಿದೆ. ಆದ್ದರಿಂದ ಆಧಾರ್ ಜೋಡಣೆಯೊಂದಿಗೆ ಮೀಟರ್ ಅಳವಡಿಸಿ ವಿದ್ಯುತ್ ಶುಲ್ಕ ವಿಧಿಸುವ ಯೋಜನೆ ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು.
ಸಂಘದ ಉಪಾಧ್ಯಕ್ಷೆ ಮಹದೇವಿ ಎಸ್. ಬೇವಿನಾಳ ಮಠ, ಜಿಲ್ಲಾಧ್ಯಕ್ಷ ಶತಕೋಟಿ ಬಸಪ್ಪ, ಕಾರ್ಯಾಧ್ಯಕ್ಷ ಚಿನ್ನಸಮುದ್ರ ಶೇಖರ್‌ನಾಯ್ಕ, ಕಾರ್ಯದರ್ಶಿ ಎನ್. ಬಸವರಾಜ್ ದಾಗಿನಕಟ್ಟೆ, ಕಾನೂನು ಸಲಹೆಗಾರ ವೀರನಗೌಡ ಪಾಟೀಲ್ ಇತರರು ಭಾಗವಹಿಸಿದ್ದರು..