More

    ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

    ಪಾಂಡವಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಐಟಿಯು ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕಾರ್ಯಕರ್ತರು ಶುಕ್ರವಾರ ತಾಲೂಕು ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

    ಪಟ್ಟಣದ ಐದು ದೀಪ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಈ ವೇಳೆ ಸಿಐಟಿಯು ಜಿಲ್ಲಾಧ್ಯಕ್ಷ ಶಿವಕುಮಾರ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ, ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ. ದೇವರು, ಮಂದಿರ ಮತ್ತು ಬಾವುಟದ ಹೆಸರಿನಲ್ಲಿ ಜನರ ಮನಸ್ಸನ್ನು ಕೆಡಿಸುವ ಕೆಲಸ ಮಾಡಲಾಗುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ದುಡಿಯುವ ಕೈಗಳಿಗೆ ಕನಿಷ್ಠ ಕೂಲಿ ನೀಡುತ್ತಿಲ್ಲ. 5 ವರ್ಷಗಳ ಅವಧಿಯಲ್ಲಿ ವೇತನದ ಮೊತ್ತವನ್ನು ಕೇವಲ 800 ರೂ. ಹೆಚ್ಚಳ ಮಾಡಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಕಾರಣ ಬಡವರು ಜೀವನ ನಡೆಸಲು ಕಷ್ಟವಾಗುತ್ತಿದೆ. ಬಂಡವಾಳಗಾರರು, ಶ್ರೀಮಂತರು ದಿನೇ ದಿನೆ ಆರ್ಥಿಕವಾಗಿ ಬೆಳೆಯುತ್ತಿದ್ದಾರೆ. ಬಡವರು ಬಡವರಾಗಿಯೇ ಉಳಿದಿದ್ದಾರೆ ಎಂದು ಕಿಡಿಕಾರಿದರು.

    ಸ್ವಾಮಿನಾಥನ್ ವರದಿ ಅನುಷ್ಠಾನಗೊಳಿಸಿದರೆ ಅವರಿಗೆ ಗೌರವ ಸಲ್ಲಿಸಿದಂತಾಗುತ್ತಿತ್ತು. ಸ್ವಾಮಿನಾಥನ್ ಅವರಿಗೆ ಭಾರತ ರತ್ನ ನೀಡಿರುವುದನ್ನು ನಾವು ಅಭಿನಂದಿಸುತ್ತೇವೆ. ಆದರೆ ಅವರ ವರದಿ ಅನುಷ್ಠಾನಕ್ಕೆ ತಂದಿದ್ದರೆ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗುತ್ತಿತ್ತು. ಕೇಂದ್ರ ಸರ್ಕಾರ ಸಾರ್ವಜನಿಕ ಸಂಸ್ಥೆಗಳಾದ ವಿದ್ಯುತ್, ರೈಲ್ವೆ, ಬಿಎಸ್‌ಎನ್‌ಎಲ್ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಮೂಲಕ ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದೆ. ಈ ಮೂಲಕ ಕಾರ್ಪೊರೇಟ್ ಸಂಸ್ಥೆಗಳನ್ನು ಬಲಗೊಳಿಸಲಾಗುತ್ತಿದೆ. ಕೇಂದ್ರ ಸರ್ಕಾರದ ನಿಲುವುಗಳನ್ನು ದುಡಿಯುವ ವರ್ಗ ಎಂದಿಗೂ ಸಹಿಸುವುದಿಲ್ಲ. ದೆಹಲಿಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಕೇಂದ್ರ ಸರ್ಕಾರದ ಪ್ರತಿನಿಧಿಗಳು ನೀಡಿರುವ ಭರವಸೆ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

    ಈ ವೇಳೆ ಕೃಷಿ ಕೂಲಿಕಾರರ ಜಿಲ್ಲಾ ಸಂಚಾಲಕ ಸುರೇಂದ್ರ, ಬಿಸಿಯೂಟ ನೌಕರರರ ಸಂಘದ ಅಧ್ಯಕ್ಷೆ ಶಾರದಾ, ಪಂಚಾಯಿತಿ ಕೂಲಿಕಾರರ ಸಂಘದ ಕೆಂಪೇಗೌಡ, ಸರಸ್ವತಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts