More

    ಮಹಿಳೋದಯ ಮಹಿಳಾ ಒಕ್ಕೂಟದಿಂದ ಪ್ರತಿಭಟನೆ

    ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲು ಮಾಡಿ ರಸ್ತೆಯಲ್ಲಿ ಮೆರವಣಿಗೆ ಮಾಡಿರುವುದು ಖಂಡಿಸಿ ಹಾಗೂ
    ಮಹಿಳೆಯರ ಗೌರವವನ್ನು ಕಾಪಾಡಲು ಕಾನೂನು ಮತ್ತು ಸುವ್ಯವಸ್ಥೆ ಬಲಪಡಿಸುವಂತೆ ಒತ್ತಾಯಿಸಿ ಮಹಿಳೋದಯ ಮಹಿಳಾ ಒಕ್ಕೂಟದಿಂದ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.


    ಸಿದ್ದಾರ್ಥನಗರದ ಹಳೇ ಡೈರಿ ಮುಂಭಾಗದಿಂದ ಹೊಸ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಬಳಿ ಸಮಾವೇಶಗೊಂಡು ಘಟನೆ ಖಂಡಿಸಿ ಘೋಷಣೆಗಳನ್ನು ಕೂಗಿದರು.

    ಮಣಿಪುರದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಅಮಾನವೀಯ ಘಟನೆಗಳಿಂದ ದೇಶದ ಮಾನ ವಿಶ್ವ ಮಟ್ಟದಲ್ಲಿ ಹರಾಜಾಗಿದೆ. ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಇದರಿಂದಾಗಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ ಎಂದು ಕಿಡಿ ಕಾರಿದರು. ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು. ತಪ್ಪಿತಸ್ಥರನ್ನು ಗಲ್ಲಿಗೇರಿಸಿ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಬೇಕು. ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.


    ಬಳಿಕ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸದಸ್ಯ ಫಾದರ್ ಅಲೆಕ್ಸ್ ಪ್ರಶಾಂತ್ ಸೀಕ್ವೆರಾ ಸೇರಿದಂತೆ ಹಲವರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts