ಜುಲೈ 30ರಂದು ನಂದಿಕೂರು ಗ್ರಾಮಸ್ಥರಿಂದ ಪ್ರತಿಭಟನೆ

protest
Published on

ಉಡುಪಿ: ಪಲಿಮಾರು ಗ್ರಾಪಂ ವ್ಯಾಪ್ತಿಯ ನಂದಿಕೂರು ಗ್ರಾಮದ ದೇವರಕಾಡು ಪ್ರದೇಶದಲ್ಲಿ ಆರಂಭಗೊಂಡಿರುವ ಎಂ11 ಎಂಬ ಇಂಡಸ್ಟ್ರಿಯಲ್ಲಿ ಬಯೋಡೀಸೆಲ್ ಹಾಗೂ ಪಾಮ್ ಆಯಿಲ್ ತಯಾರಿಸುತ್ತಿದ್ದು, ಪರಿಸರ ಹಾಗೂ ಜಲ ಮಾಲಿನ್ಯ ಉಂಟಾಗಿದೆ. ಘಟಕದಿಂದ ಸಾರ್ವಜನಿಕರು ಹಾಗೂ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿದ್ದು, ಜುಲೈ 30ರಂದು ಬೆಳಗ್ಗೆ 10 ಗಂಟೆಗೆ ಎಂ11 ಇಂಡಸ್ಟ್ರಿ ಎದುರು ಶಾಂತಿಯುತ ಪ್ರತಿಭಟನೆ ನಡೆಸಲಿದ್ದೇವೆ ಎಂದು ಗ್ರಾಮಸ್ಥೆ ಹಾಗೂ ಗ್ರಾಪಂ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ ಮಾಹಿತಿ ನೀಡಿದರು.

ಈ ಘಟಕದ ಸುತ್ತಮುತ್ತ ಕೃಷಿಕರು ಹಾಗೂ ಅರಣ್ಯ ಪ್ರದೇಶ ಇದೆ. ಆದರೂ ಇಂತಹ ಸ್ಥಳದಲ್ಲಿ ಪರಿಸರಕ್ಕೆ ಮಾರಕವಾದ ಉದ್ಯಮ ತೆರೆದಿದ್ದಾರೆ. ನೆಲ, ಜಲ ಹಾಗೂ ಪರಿಸರ ರಕ್ಷಣೆಗಾಗಿ ಹಾಗೂ ಜನರ ಆರೋಗ್ಯದ ದೃಷ್ಟಿಯಿಂದ ಪ್ರತಿಭಟನೆ ಕೈಗೊಂಡಿದ್ದೇವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ತಾಪಂ ಮಾಜಿ ಸದಸ್ಯ ದಿನೇಶ್ ಕೋಟ್ಯಾನ್ ಮಾತನಾಡಿ, ಹಾಲಿ ಶಾಸಕರು, ಮಾಜಿ ಶಾಸಕರು ಈ ಘಟಕಕ್ಕೆ ಭೇಟಿ ನೀಡಿ ಪರಿಸರ ವಾಲಿನ್ಯ ರಹಿತವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದರೂ ಕಂಪನಿ ಸ್ಪಂದಿಸುತ್ತಿಲ್ಲ ಪರಿಸರ ಹಾಗೂ ಜನಜೀವನಕ್ಕೆ ಹಾನಿಯಾಗುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದೇವೆ ಎಂದರು. ಗ್ರಾಪಂ ಉಪಾಧ್ಯಕ್ಷ ರಾಯೇಶ್ವರ್ ಪೈ, ತಾಪಂ ಮಾಜಿ ಸದಸ್ಯ ಲಕ್ಷ್ಮಣ ಶೆಟ್ಟಿ, ಗ್ರಾಮಸ್ಥ ನಾಗೇಶ್ ರಾವ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net