More

    ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಪ್ರತಿಭಟನೆ

    ಧಾರವಾಡ: ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ಸಿಬ್ಬಂದಿ ನೇಮಕದಲ್ಲಿನ ಸಮಸ್ಯೆ ನಿವಾರಣೆ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ನೌಕರರ ಸಮನ್ವಯ ಸಮಿತಿಯಿಂದ ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

    ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2015ರ ಡಿ. 31ರೊಳಗೆ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಅನುಮತಿ ನೀಡಿದೆ. ಸಂಸ್ಥೆಗಳು ರಾಜ್ಯ ಮಟ್ಟದ ಪತ್ರಿಕೆಗೆ ಆಯಾ ಜಿಲ್ಲಾ ಮಟ್ಟದಲ್ಲಿ ಜಾಹೀರಾತು ಕೊಟ್ಟು ಸಂದರ್ಶನ ನಡೆಸಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ ಕಡತವನ್ನು ಆಯುಕ್ತರ ಕಚೇರಿಗೆ ಕಳುಹಿಸಿವೆ. ಆದರೆ, ಆಯುಕ್ತರ ಕಚೇರಿಯಲ್ಲಿ ಸಣ್ಣಪುಟ್ಟ ದೋಷಗಳನ್ನು ಮುಂದಿಟ್ಟುಕೊಂಡು ಕಡತ ವಿಲೇವಾರಿ ಮಾಡುತ್ತಿಲ್ಲ. ಸರ್ಕಾರ ಪ್ರತಿವರ್ಷ ಖಾಲಿ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದರೆ ಎಲ್ಲ ಷರತ್ತುಗಳನ್ನು ಪೂರೈಸಲು ಸಾಧ್ಯ. ಆದರೆ, 5- 6 ವರ್ಷಗಳಿಗೊಮ್ಮೆ ಅನುಮತಿ ನೀಡುತ್ತಿರುವುದರಿಂದ ಖಾಲಿ ಹುದ್ದೆ ಇಟ್ಟುಕೊಂಡು ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅನುದಾನಿತ ಶಿಕ್ಷಣ ಸಂಸ್ಥೆಗಳು ನೇಮಕ ಮಾಡಿಕೊಂಡ ಶಿಕ್ಷಕರ ಹುದ್ದೆಗಳನ್ನು ತಿರಸ್ಕರಿಸದೆ ಅನುಮೋದಿಸಬೇಕು ಎಂದು ಪ್ರತಿಭಟನಾಕಾರರು ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದರು.

    ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ, ಜಿ.ಆರ್. ಭಟ್, ಶ್ಯಾಮ ಮಲ್ಲನಗೌಡರ, ನೀಲಕಂಠ ಎಸ್.ಆರ್., ವಿ.ಎಸ್. ಹುದ್ದಾರ, ಎನ್.ಎನ್. ಸವಣೂರ, ಎಸ್.ಎಸ್. ಅಂಗಡಿ, ಪಿ.ಸಿ. ವನಮಾಲಣ್ಣವರ, ಐ.ಎಂ. ಮುಲ್ಲಾ, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts